ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಗ್ರಾಮೀಣರು ಕೌಶಲ್ಯ ತರಬೇತಿಯಿಂದ ವಂಚಿತ

Rashmi Kasaragodu
Updated On : 5 Sept 2013, 12:36 pm

ಕ.ಪ್ರ.ವಾರ್ತೆ   ಚಿಕ್ಕಬಳ್ಳಾಪುರ   ಸೆ. 4
ನಗರದ ಅಂಬೇಡ್ಕರ್ ಭವನದಲ್ಲಿ ನಿರುದ್ಯೋಗ ಯುವಕ-ಯುವತಿಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಗೆ ಫಲಾನುಭವಿ ಆಯ್ಕೆ ಮಾಡುವ ಮಾರ್ಗದರ್ಶನ ಸಭೆ ನಡೆಯಿತು.
ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ನಗರಸಭೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕೆನರಾ ಬ್ಯಾಂಕಿನ ಗ್ರಾಮೀಣ ಉದ್ಯೋಗ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವಿಭಾಗದ ನಿರ್ದೇಶಕ ಕೆ.ಕೆ. ಪೊನ್ನಪ್ಪ, ಇಡೀ ವಿಶ್ವದಲ್ಲಿಯೇ ಅತಿಹೆಚ್ಚು ಯುವಶಕ್ತಿ ಹೊಂದಿರುವ ಏಕೈಕ ದೇಶ ನಮ್ಮದು. ಗ್ರಾಮೀಣ ಭಾಗದ ಯುವಕ ಯುವತಿಯರಿಗೆ ವಿವಿಧ ರೀತಿಯ ಕೌಶಲ್ಯ ತರಬೇತಿಗಳನ್ನು ಪಡೆಯುವ ಇಚ್ಛೆ ಇದ್ದರೂ ಇದಕ್ಕೆ ತಗಲುವ ವೆಚ್ಚ ಭರಿಸಲಾಗದೆ ಆರ್ಥಿಕ ಸಂಕಷ್ಟದಿಂದ ತರಬೇತಿಯಿಂದ ವಂಚಿತರಾಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಯುವ ಜನಾಂಗದವರು ಹೆಚ್ಚಿನ ಉದ್ಯೋಗಾವಕಾಶ ಪಡೆದುಕೊಳ್ಳುವ ಸಲುವಾಗಿ ತಮ್ಮ ಸಂಸ್ಥೆಯಿಂದ ಕಂಪ್ಯೂಟರ್ ತರಬೇತಿ, ಟೈಲರಿಂಗ್, ಬ್ಯೂಟಿ ಪಾರ್ಲರ್, ಪೋಟೋಗ್ರಪಿ, ಹೈನುಗಾರಿಕೆ, ಮೊಬೈಲ್ ಸರ್ವಿಸ್, ಚಾಲನಾ ತರಬೇತಿ, ಇನ್ನೂ ಹಲವು ವೈವಿಧ್ಯಮಯ ಕೌಶಲ್ಯ ವೃತ್ತಿಗಳ ಬಗ್ಗೆ 6 ದಿನಗಳಿಂದ 45 ದಿನಗಳವರೆಗಿನ ವಿವಿಧ ರೀತಿಯ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಮೀಣ ಭಾಗದ ಯುವಕರಿಗೆ ಪರಿಣತಿ ಹೊಂದಿದ ತಜ್ಞರಿಂದ ತರಬೇತಿ ನೀಡುತ್ತಿದ್ದು ಊಟ ವಸತಿ ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಆಸಕ್ತರು ತರಬೇತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಸಮುದಾಯದ ಅಭಿವೃದ್ಧಿ ತಜ್ಞ ವೆಂಕಟಾಚಲಪತಿ ಮಾತನಾಡಿ, ನಗರಸಭೆಯ ವ್ಯಾಪ್ತಿಯಲ್ಲಿ ಸ್ವರ್ಣ ಜಯಂತಿ ರೋಜ್‌ಗಾರ್ ಯೋಜನೆ ಹಾಗೂ ಇತರೆ ಬಡತನ ನಿರ್ಮೂಲನೆ ಯೋಜನೆಗಳಡಿ ಬಡತನ ರೇಖೆಗಿಂತ ಕೆಳಗಿರುವ ಯುವಕ, ಯುವತಿ ಅಭ್ಯರ್ಥಿಗಳಿಗೆ ವಿವಿಧ ರೀತಿಯ ಕೌಶಲ್ಯ ವೃತ್ತಿ ತರಬೇತಿಗಳಿಗೆ ಆಯ್ಕೆ ಮಾಡಲಾಗುವುದು. ತರಬೇತಿ ಉಚಿತವಾಗಿದ್ದು, ತರಬೇತಿ ಅವಧಿಯಲ್ಲಿ ಪ್ರೋತ್ಸಾಹಧನ ಸಹ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯಲ್ಲಿ ಶೇ.80 ಹಾಜರಾತಿ ಕಡ್ಡಾಯವಾಗಿರುತ್ತದೆ ಎಂದರು.
ಸಭೆಯಲ್ಲಿ ನಗರಾಭಿವೃಧ್ಧಿ ಕೋಶದ ಯೋಜನಾ ನಿರ್ದೇಶಕ ನಾಗರಾಜ ಶೆಟ್ಟಿ, ಪೌರಾಯುಕ್ತ ಬಿ.ಕೆ.ರುದ್ರಮುನಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಸುಂದರೇಶ್ ಹಾಗೂ ಲೋಕಾಮಾತಾ ಮತ್ತು ಶಾಂತಿ ನಿಕೇತನ, ಸರ್ಕಾರೇತರ ಸಂಸ್ಥೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement