ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಆರೋಪಿ ಬಂಧನಕ್ಕೆ ಒತ್ತಾಯಿಸಿ ಪ್ರತಿಕೃತಿ ದಹನ

Rashmi Kasaragodu
Updated On : 6 Sept 2013, 12:07 pm

ಕೋಲಾರ: ಪತ್ನಿ ಮತ್ತು ಮಗುವಿನ ಸಾವಿನ ಹಿನ್ನೆಲೆಯಲ್ಲಿ ತಲೆ ಮರಿಸಿಕೊಂಡಿರುವ ಆರೋಪಿ ಸಂತೋಷ್‌ಕುಮಾರ್ ಬಂಧನಕ್ಕೆ ಜಿಲ್ಲಾ ಆಡಳಿತ ಮತ್ತು ಜನಪ್ರತಿನಿಧಿಗಳು ಆಸಕ್ತಿ ತೋರುತ್ತಿಲ್ಲವೆಂದು ಆರೋಪಿಸಿ ಪ್ರಗತಿಪರ ಸಂಘಟನೆಗಳು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾ ಆಡಳಿತದ ಪ್ರತಿಕೃತಿ ದಹನ ನಡೆಸಿತು.
  ಸಂತೋಷ್‌ಕುಮಾರ್ ಹೆಚ್ಚಿನ ವರದಕ್ಷಿಣೆಗಾಗಿ ಎರಡನೇ ಮದುವೆಗಾಗಿ ಹೆಂಡತಿ ವೀಣಾ ಮತ್ತು ಮಗಳು ದೀಪ್ತಿಯನ್ನು ಕಳೆದ ಜುಲೈ 10 ರಂದು ಕೊಲೆ ಮಾಡಿ ನಾಪತ್ತೆಯಾಗಿದ್ದು ಪೊಲೀಸರು ರಾಜಕೀಯ ಒತ್ತಡಗಳಿಗೆ ಮಣಿದು ಆರೋಪಿಯನ್ನು ಬಂಧಿಸುತ್ತಿಲ್ಲವೆಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮುಖಂಡರು ಆರೋಪಿಸಿದ್ದಾರೆ. ಜನವಾದಿ ಮಹಿಳಾ ಸಂಘಟನೆಯಿಂದ ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಕಳೆದ ಎರಡು ವಾರಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಯುತ್ತಿದ್ದರೂ ಜಿಲ್ಲಾ ಆಡಳಿತ ಸ್ಪಂದಿಸುತ್ತಿಲ್ಲ, ಜನಪ್ರತಿನಿಧಿಗಳು ಸಮಸ್ಯೆ ನಿವಾರಣೆ ಮಾಡುತ್ತಿಲ್ಲವೆಂದು ಮುಖಂಡರು ದೂರಿದರು. ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಗೀತ, ಸಿಪಿಐ(ಎಂ) ಮುಖಂಡ ಗಾಂಧಿನಗರ ನಾರಾಯಣಸ್ವಾಮಿ, ದಲಿತ ಮುಖಂಡರಾದ ವಿಜಯಕುಮಾರ್, ಪಂಡಿತ್ ಮುನಿವೆಂಕಟಪ್ಪ, ಕೆಟಿಎಸ್‌ಎಸ್ ಜಿಲ್ಲಾಧ್ಯಕ್ಷ ಆಸೀಬ್, ಮೃತ ವೀಣಾರವರ ತಂದೆ ಬೀರೇಗೌಡ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement