ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜೆಡಿಎಸ್-ಬಿಜೆಪಿ ಸದಸ್ಯರಿಗೆ ವಿಪ್

Rashmi Kasaragodu
Updated On : 6 Sept 2013, 12:03 pm

ಕೋಲಾರ: ಇಲ್ಲಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೆ.6 ರಂದು ಶುಕ್ರವಾರ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರ ತಂತ್ರಗಾರಿಕೆ ವಿಫಲಗೊಳಿಸುವ ಮೂಲಕ ಅಧಿಕಾರ ಹಿಡಿಯಲು ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ತಮ್ಮ ತಮ್ಮ ಪಕ್ಷದ ಸದಸ್ಯರಿಗೆ ವಿಪ್ ಜಾರಿ ಮಾಡಿದ್ದಾರೆ.
ಪಕ್ಷಾಂತರ ಇಲ್ಲವೇ ಅಡ್ಡ ಮತದಾನ ಮಾಡಿದಲ್ಲಿ ಸದಸ್ಯತ್ವಕ್ಕೆ ಕುತ್ತು ಉಂಟಾಗುತ್ತದೆ ಎಂಬ ಎಚ್ಚರಿಕೆಯೊಂದಿಗೆ ಜೆಡಿಎಸ್ಪ್‌ಕ್ಷದ 13 ಹಾಗೂ ಬಿಜೆಪಿಯ 7ಸದಸ್ಯರಿಗೆ ಈ ಎರಡೂ ಪಕ್ಷದ ವರಿಷ್‌ಠರು ವಿಪ್ ಜಾರಿ ಮಾಡಿದ್ದಾರೆ.
ಈ ನಡುವೆ ಜಿ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಬಿಜೆಪಿ ನಾಯಕರು ಸಮ್ಮತಿಸಿದ್ದಾರೆಂದು ಹೇಳಲಾಗುತ್ತಿದ್ದು, ಜೆಡಿಎಸ್‌ಗೆ ಬೆಂಬಲ ನೀಡುವ ಬಿಜೆಪಿಗೆ ಉಪಾಧ್ಯಕ್ಷ ಸ್ಥಾನ ಬಿಟ್ಟು ಕೊಡುವ ಬಗ್ಗೆಯೂ ಚಿಂತನೆ ನಡೆದಿದೆ ಎನ್ನಲಾಗಿದೆ.
ಶಾಸಕ ವರ್ತೂರ್ ಪ್ರಕಾಶ್ ವಿರುದ್ಧ ಮುನಿಸಿಕೊಂಡು ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪನವರಿಗೆ ಬೆಂಬಲ ವ್ಯಕ್ತಪಡಿಸಿರುವ ಪಕ್ಷೇತರ ಸದಸ್ಯ ಅಮರನಾಥ್ ಅವರನ್ನು ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಮನಮೊಲಿಸಿ ಈ ಬಾರಿ ಜೆಡಿಎಸ್ ಬಿಜೆಪಿ ಮೈತ್ರಿ ಕೂಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆನ್ನಲಾಗಿದ್ದು ಒಂದು ವೇಳೆ ಅಮರನಾಥ್ ಜೆಡಿಎಸ್ -ಬಿಜೆಪಿ ಮೈತ್ರಿ ಕೂಟಕ್ಕೆ ಬೆಂಬಲ ನೀಡಿದಲ್ಲಿ ಜೆಡಿಎಸ್ ಜಿ.ಪಂ ಆಡಳಿತ ಹಿಡಿಯುವುದು ಸುಲಭವಾಗುವುದರಲ್ಲಿ ಅನುಮಾನವಿಲ್ಲ.
ಒಂದು ವೇಳೆ ಅಮರನಾಥ್ ಜೆಡಿಎಸ್ ಬಿಜೆಪಿ ಮೈತ್ರಿಕೂಟಕ್ಕೆ ಬೆಂಬಲ ನೀಡಿದಲ್ಲಿ ಬಿಜೆಪಿಯ ಬಗ್ಗೆ ಮೃಧು ಧೋರಣೆ ಹೊಂದಿರುವ ಶಾಸಕ ವರ್ತೂರ್ ಪ್ರಕಾಶ್ ಯಾವ ತೀರ್ಮಾನ ಕೈಗೊಳ್ಳುತ್ತಾರೆಂಬುದು ಕುತೂಹಲ ಮೂಡಿಸಿದೆ.
ಸದಸ್ಯ ಅಮರನಾಥ್ ಹಾಗೂ ಬಿಜೆಪಿ 5 ಮಂದಿ ಸದಸ್ಯರು ಕೈಗೊಳ್ಳುವ ನಿರ್ಧಾರ ಅವಲಂಭಿಸಿ ಕಾಂಗ್ರೆಸ್ ಶುಕ್ರವಾರ ನಡೆಯಲಿರುವ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಸಾಧ್ಯತೆಗಳಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement