15 ರಂದು ಪತ್ರಕರ್ತರ ಸಹಕಾರ ಸಂಘದ ಚುನಾವಣೆ
ಕೋಲಾರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿದೋದ್ದೇಶ ಸಹಕಾರ ಸಂಘ ನಿಯಮಿತದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯನ್ನು ಸೆ. 15 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಕೋಲಾರದ ಅಂತರಗಂಗೆ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ನಡೆಸಲಾಗುವುದು ಎಂದು ಸಂಘದ ಚುನಾವಣಾಧಿಕಾರಿ ಎಂ.ಐ. ಅಬೀದ್ ಹುಸೇನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಂಘದ ಒಟ್ಟು 17 ಸ್ಥಾನಗಳ ಪೈಕಿ 13 ಸ್ಥಾನಗಳನ್ನು ಸಾಮಾನ್ಯ ವರ್ಗಕ್ಕೂ, ತಲಾ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಕ್ಕೂ ಹಾಗೂ 2 ಸ್ಥಾನಗಳನ್ನು ಮಹಿಳಾ ಸ್ಥಾನಗಳಾಗಿ ಮೀಸಲಾಗಿಟ್ಟಿದೆ.ಕೋಲಾರ ಪತ್ರಕರ್ತರ ಭವನದಲ್ಲಿ ನಾಮಪತ್ರ ಸಲ್ಲಿಸಲು ಕೊನೆ ದಿನಾಂಕ ಸೆ.9 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆವರೆಗೆ, ನಾಮಪತ್ರಗಳ ಪರಿಶೀಲನೆ ನಾಮಪತ್ರಗಳನ್ನು ವಾಪಸ್ ಪಡೆಯಲು ಸೆ.11ರಂದು ಮಧ್ಯಾಹ್ನ 3 ಗಂಟೆವರೆಗೆ, ಅದೇ ದಿನ ಕ್ರಮಬದ್ಧ ನಾಮಪತ್ರಗಳ ಪ್ರಕಟಣೆ ಮಧ್ಯಾಹ್ನ 3 ರ ನಂತರ, ಸೆ.15 ರಂದು ಮತದಾನ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆವರೆಗೆ ನಡೆಯುತ್ತದೆ.