ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವಿನೂತನವಾಗಿ ಶಿಕ್ಷಕರ ದಿನಾಚರಣೆ

Rashmi Kasaragodu
Updated On : 7 Sept 2013, 1:17 am

ಚಿಂತಾಮಣಿ: ಪಟ್ಟಣದ ಡಾಲ್ಫಿನ್ ಡೆಲ್ಲಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನವನ್ನು ಮಕ್ಕಳಿಂದ ವಿನೂತನವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಕ್ಕಳೇ ಸ್ವತಃ ವಿವಿಧ ತಿಂಡಿ- ತಿನಿಸು ತಯಾರಿಸಿ ಮಾರಾಟಕ್ಕಿಟ್ಟಿದ್ದರು. ಪೋಷಕರು ತಿಂಡಿ- ತಿನಿಸುಗಳನ್ನು ಖರೀದಿಸಿದರು. ವಿದ್ಯಾರ್ಥಿಗಳು ರುಚಿ- ರುಚಿಯಾದ ನಾಲಿಗೆ ಚಪ್ಪರಿಸುವ ತಿಂಡಿಗಳನ್ನು ಸಿದ್ಧಪಡಿಸಿದ್ದರು. ಈ ಎಲ್ಲಾ ತಿಂಡಿಗಳನ್ನು ಪೋಷಕರು, ಮಕ್ಕಳು ಖರೀದಿಸಿ ಆನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯರು, ಸಮಾಜದ ಅಭಿವೃದ್ಧಿಯಲ್ಲಿ ಹಾಗೂ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು ಎಂದು ತಿಳಿಸಿದರು.
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆಡಳಿತ ಮಂಡಳಿಯವರು ಶಿಕ್ಷಕರಿಗೆ ಕಿರುಕಾಣಿಕೆ ನೀಡಿ ಗೌರವಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement