ಆರೋಗ್ಯ ಕೇಂದ್ರಕ್ಕೆ ಗುದ್ದಲಿ ಪೂಜೆ
ಗುಡಿಬಂಡೆ: ತಾಲೂಕಿನ ಎಲ್ಲೋಡು ಗ್ರಾಮದಲ್ಲಿ ನಿರ್ಮಾಣವಾಗಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಗುದ್ದಲಿ ಪೂಜೆಯನ್ನು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯ ಅಶ್ವತ್ಥಪ್ಪ, ಮಾಜಿ ಸದಸ್ಯ ಚೆಂಡೂರು ವೆಂಕಟೇಶ್, ಸರ್ಕಾರಿ ಆಸ್ಪೆತ್ರೆ ವೈದ್ಯ ಅಶೋಕ, ವೈದ್ಯೆ ಸ್ವಾತಿ ಸೇರಿದಂತೆ ಎಲ್ಲೋಡು ಗ್ರಾಮದ ಮುಖಂಡರು ಭಾಗವಹಿಸಿದ್ದರು.