11ರಿಂದ ಪೈಕಾ ದಸರಾ ಕ್ರೀಡಾಕೂಟ
ಚಿಕ್ಕಬಳ್ಳಾಪುರ: ನಗರದ ಸರ್ ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.11 ಮತ್ತು 12 ರಂದು ಎರಡು ದಿನಗಳ ತಾಲೂಕು ಮಟ್ಟದ ಪೈಕಾ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ. ಭಾರತೀಯ ಕ್ರೀಡಾ ಪ್ರಾಧಿಕಾರ, ಪಂಚಾಯಿತಿ ಯುವ ಕ್ರೀಡಾ ಔರ್ ಖೇಲ್ ಅಭಿಯಾನ್ ಪೈಕಾ) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಆಶ್ರಯದಲ್ಲಿ ಸೆ. 11ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಪಂಚಾಯಿತಿ ಅಧ್ಯಕ್ಷ ಓಬಳೇಶಪ್ಪ ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಡಾ.ಕೆ. ಸುಧಾಕರ್ ವಹಿಸಲಿದ್ದಾರೆ. ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ಭಾರತಿ ಎನ್. ಮೂರ್ತಿ, ಜಿಪಂ ಸದಸ್ಯರಾದ ಪಿ.ಎನ್. ಮುನೇಗೌಡ, ಎನ್. ಮಂಜುಳ ವೆಂಕಟೇಶ್ ಭಾಗವಹಿಸಲಿದ್ದಾರೆ.