ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕಾಮಗಾರಿ ಅನುಷ್ಠಾನ ತರಬೇತಿ ಸಮಾವೇಶ

Rashmi Kasaragodu
Updated On : 8 Sept 2013, 11:18 am

ಮುಳಬಾಗಲು: ಗ್ರಾಮೀಣ ಪ್ರದೇಶದಲ್ಲಿ ಅರ್ಹ ಫಲಾನುಭವಿಗಳಿಗೆ ಜಮೀನಿನಲ್ಲಿ ನೀರಾವರಿ ಸೌಲಭ್ಯ ತೋಟಗಾರಿಕೆ ಗಿಡ ನೆಡಿಸುವುದು, ಬದುಗಳ ನಿರ್ಮಾಣ, ಕೃಷಿ ಹೊಂಡ, ಭೂ ಅಭಿವೃದ್ಧಿ, ಅರಣ್ಯೀಕರಣ, ಗೋಕುಂಟೆ ತೆರವುಗೊಳಿಸುವುದು ಮುಂತಾದ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು. ಪಟ್ಟಣದ ಪುರಂದರ ಭವನದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ರಾಷ್ಟ್ರೀಯ ಗ್ರಾಮೀಣ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆ ಕಾಮಗಾರಿ ಅನುಷ್ಠಾನ ಸಭೆಯಲ್ಲಿ ಮಾತನಾಡಿ, ನಮ್ಮ ದಾರಿ ಯೋಜನೆಯಡಿಯಲ್ಲಿ 2013- 14ನೇ ಯೋಜನೆಗಳ ಶೀಘ್ರ ಅನುಷ್ಠಾನ ಬಗ್ಗೆ ತರಬೇತಿ ಸಮಾರಂಭ ಪ್ರಾರಂಭಿಸಿ ಮಾತನಾಡಿದರು.  ಮುಳಬಾಗಲು ತಾಲೂಕನ್ನು ಮಾದರಿ ತಾಲೂಕಾಗಿ ಮಾಡಿಸಲು ಪಕ್ಷತೀತಾವಾಗಿ ಎಲ್ಲರೂ ಸಹಕರಿಸಬೇಕು ಎಂದು ನುಡಿದ ಅವರು, ಜನಪರ ಕಾರ್ಯಕ್ರಮಗಳಿಗೆ ಸರ್ಕಾರಿ ಅಧಿಕಾರಿಗಳು ಯಾವುದೇ ಒತ್ತಡಕ್ಕೊಳಗಾಗದೆ ಜನಪರ ಕಾರ್ಯಕ್ರಮ ನಿರ್ವಹಿಸಬೇಕು ಎಂದು ಹೇಳಿದರು.
ಸಭೆಗೆ ಹಾಜರಾಗದ ಪಿಡಿಒ, ಕಾರ್ಯದರ್ಶಿಗಳ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸಿದರು. ತಹಸೀಲ್ದಾರ್ ಡಿ.ವಿ. ರಾಮಮೂರ್ತಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ. ರಮಾನಂದ್ ಮುಂತಾದರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement