ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಟ್ರ್ಯಾಕ್ಟರ್ನಿಂದ ಬಿದ್ದು ಮಹಿಳೆ ಸಾವು

Rashmi Kasaragodu
Updated On : 8 Sept 2013, 11:17 am

ಚಿಂತಾಮಣಿ: ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಮಹಿಳೆಯೊಬ್ಬರು ಟ್ರ್ಯಾಕ್ಟರ್ ವಾಹನದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡದನಮರಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ತಾಲೂಕಿನ ಚೇಳೂರು ಬಳಿ ಇರುವ ಹೊಸಹುಡ್ಯ ಗ್ರಾಮದ ಸರಸ್ವತಮ್ಮ(45) ಎಂಬ ಮಹಿಳೆ ಕೂಲಿ ಕೆಲಸ ಮುಗಿಸಿಕೊಂಡು ಟ್ರ್ಯಾಕ್ಟರ್ನಲ್ಲಿ ಹಿಂದಿರುಗುತ್ತಿದ್ದರು. ಚಾಲಕ ಶಿವಾರೆಡ್ಡಿ ಅತಿ ವೇಗದಿಂದ ಚಾಲನೆ ಮಾಡಿದ್ದರಿಂದ ತಿರುವಿನಲ್ಲಿ ವಾಹನವು ನಿಯಂತ್ರಣಕ್ಕೆ ಬಾರದೆ ಪಕ್ಕದಲ್ಲೇ ಕುಳಿತಿದ್ದ ಸರಸ್ವತಮ್ಮ ಕೆಳಕ್ಕೆ ಬಿದ್ದು ಟ್ರ್ಯಾಕ್ಟರ್ ಚಕ್ರಕ್ಕೆ ಸಿಕ್ಕಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement