ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಆಯ್ಕೆ

Rashmi Kasaragodu
Updated On : 8 Sept 2013, 11:15 am

ಕ.ಪ್ರ.ವಾರ್ತೆ   ಕೆಜಿಎಫ್   ಸೆ.8
ಕ್ಷೇತ್ರದ ಪಾರಂಡಹಳ್ಳಿ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೃಷ್ಣಾರೆಡ್ಡಿ ಹಾಗೂ ವೆಂಕಟೇಶ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ವ್ಯವಸಾಯ ಸೇವಾ ಸಹಕಾರ ಸಂಘದ 2013 ಹಾಗೂ 2018ರ ವರೆಗೆ ಸಂಘದ 10 ಸದಸ್ಯರನ್ನು ಕಳೆದ ಆ. 26ರಂದು ಅವಿರೋಧ ಆಯ್ಕೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಸಂಘದ ಎಲ್ಲಾ ಸದಸ್ಯರು ಒಮ್ಮತದಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಕೆ.ವಿ. ರಾಧಾಕೃಷ್ಣ ತಿಳಿಸಿದ್ದಾರೆ.
ಪಾರಂಡಹಳ್ಳಿ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಕಾರ್ಯದರ್ಶಿ ರಘು, ಸಂಘದ ಎಲ್ಲಾ10 ಸದಸ್ಯರು, ಜಿಲ್ಲಾ ಪಂಚಾಯಿತಿ ಸದಸ್ಯ ಆರ್. ನಾರಾಯಣರೆಡ್ಡಿ, ಪಾರಂಡಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಸುಬ್ಬಾರೆಡ್ಡಿ, ತಾಪಂ ಸದಸ್ಯ ರಮೇಶ್, ಮುಖಂಡರಾದ ವೆಂಕಟರಾಮ್, ಬಾಲಕೃಷ್ಣ, ಸದಸ್ಯರಾದ ರಾಮಚಂದ್ರರೆಡ್ಡಿ, ರಮೇಶ್, ಗ್ರಾಪಂ ಮಾಜಿ ಅಧ್ಯಕ್ಷ ಬಾಲಕೃಷ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement