ಕಾಲುಬಾಯಿ ಜ್ವರ: 51ಹಸು ಸಾವು
ಕೋಲಾರ: ಕಳೆದ ಒಂದು ತಿಂಗಳಿನಿಂದ ಜಿಲ್ಲೆಯಲ್ಲಿ ಹಸುಗಳಿಗೆ ಕಾಣಿಸಿಕೊಂಡಿರುವ ಕಾಲುಬಾಯಿಜ್ವರ, ಗಂಟಲು ಬೇನೆಗೆ ಸುಮಾರು 51ಕ್ಕೂ ಹೆಚ್ಚು ಹಸು-ಕರುಗಳು ಮೃತಪಟ್ಟಿರುವ ಹಿನ್ನೆಲೆಯಲ್ಲಿ ತಜ್ಞರು ಜಿಲ್ಲೆಗೆ ಭೇಟಿ ನೀಡಿ ರೋಗ ನಿಯಂತ್ರಣಕ್ಕೆ ಕ್ರಮ ಜರುಗಿಸಿದ್ದಾರೆ. ಜಿಲ್ಲಾದ್ಯಂತ ಕಾಲು ಬಾಯಿ ರೋಗ ಕಾಣಿಸಿಕೊಂಡಿರುವುದರಿಂದ ಹೈನುಗಾರಿಕೆಯನ್ನು ನಂಬಿರುವ ರೈತರ ಕಷ್ಟ ಅರಿತ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಕಡೆಗೂ ರೈತರ ಬಳಿ ಧಾವಿಸಿ ಸಮಸ್ಯೆಗೆ ಪರಿಹಾರ ನೀಡಲಾರಂಭಿಸಿರುವುದರಿಂದ ರೈತರಿಗೆ ಕೊಂಚ ನೆಮ್ಮದಿ ಸಿಕ್ಕಿದಂತಾಗಿದೆ. ಪಶುಸಂಗೋಪನಾ ಇಲಾಖೆಯ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 1,.23.376 ಹಸುಗಳು, 24294 ಎಮ್ಮೆ ಸೇರಿದಂತೆ ಒಟ್ಟು 1.47 ಜಾನುವಾರುಗಳಿವೆ.