ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಪಘಾತದಲ್ಲಿ ವ್ಯಕ್ತಿ ಸಾವು

Mainashree
Updated On : 13 Sept 2013, 12:03 pm

ಚಿಕ್ಕಬಳ್ಳಾಪುರ: ಅತಿ ವೇಗವಾಗಿ ಬಂದ ಜೀಪೊಂದು ಅಪಘಾತಕ್ಕೀಡಾಗಿ ಒಬ್ಬರು ಮೃತಪಟ್ಟು, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಸಂಭವಿಸಿದೆ.
ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಅವೈಜ್ಞಾನಿಕ ರಸ್ತೆ ನಿರ್ಮಾಣ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಪಘಾತಗಳು ಸಂಭವಿಸುತ್ತಿವೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.
ತಾಲೂಕಿನ ದೊಡ್ಡಪೈಲಗುರ್ಕಿ ಬಳಿಗೆ ಅತಿ ವೇಗವಾಗಿ ಬಂದ ಜೀಪು ನಿಯಂತ್ರಣಕ್ಕೆ ಬಾರದೇ ಮೊದಲು ಸಿಗ್ನಲ್ ಲೈಟಿಗೆ ಡಿಕ್ಕಿ ಹೊಡೆದಿದೆ. ಹಾಗೆಯೇ ಮುಂದೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೂ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಇದರಿಂದ ಜೀಪಿನಲ್ಲಿದ್ದ ಗಂಗಪ್ಪ (32 ) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇನ್ನೂ ದ್ವಿಚಕ್ರ ವಾಹನ ಸವಾರ ವೆಂಕಟೇಶಪ್ಪ (38) ಮತ್ತು ಜೀಪಿನಲ್ಲಿದ್ದ ನರೇಶ್, ಬಯ್ಯಣ್ಣ ತೀವ್ರವಾಗಿ ಗಾಯಗೊಂಡಿದ್ದಾರೆ.
ಅಪಘಾತವಾಗುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಜಾಗದಲ್ಲಿ ಅಪಘಾತಗಳು ಹೆಚ್ಚಿಗೆ ಸಂಭವಿಸಿ ಹಲವರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಮತ್ತೆ ಕೆಲವರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿ ತೊಂದರೆಯನ್ನು ಅನುಭವಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆಯನ್ನು ನಿರ್ಮಿಮಿಸಬೇಕೆಂದು ಒತ್ತಾಯಿಸುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.
ಕೂಡಲೇ ಘಟನೆಯ ಸ್ಥಳಕ್ಕೆ ಪೊಲೀಸರು ಆಗಮಿಸಿ ಜನರನ್ನು ಸಮಾಧಾನಪಡಿಸಿದರು. ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement