ತಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಚಿಕ್ಕಬಳ್ಳಾಪುರ: ತಾಲೂಕು ಪಂಚಾಯಿತಿ ನೂತನ ಅಧ್ಯಕ್ಷರಾಗಿ (ಅಗಲಗುರ್ಕಿ ಕ್ಷೇತ್ರದ ತಾಲೂಕು ಪಂಚಾಯಿತಿ ಸದಸ್ಯ) ಕೆ.ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷರಾಗಿ (ದಿಬ್ಬೂರು ತಾಲೂಕು ಪಂಚಾಯಿತಿ ಸದಸ್ಯೆ) ಲಕ್ಷ್ಮಮ್ಮ ಆಂಜನಪ್ಪ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ಓಬಳೇಶಪ್ಪ ಮತ್ತು ಉಪಾಧ್ಯಕ್ಷರಾಗಿದ್ದ ಭಾರತಿ ಅವರು ಇತ್ತೀಚೆಗೆ ರಾಜಿನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆದಿದ್ದು, ತಾಲೂಕು ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಕೆ.ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಮ್ಮ ಆಂಜನಪ್ಪ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳು ತುಂಬಿ ತುಳುಕಾಡುತ್ತಿದ್ದು, ಇವುಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಶ್ರಮಿಸುತ್ತೇನೆ. ಪ್ರಮುಖವಾಗಿ ನೀರಿನ ಸಮಸ್ಯೆ ನಿವಾರಣೆ, ಮೂಲ ಸೌಕರ್ಯ ಒದಗಿಸಲಾಗುವುದು ಎಂದ ಅವರು, ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ತಾಲೂಕನ್ನು ಅಭಿವೃದ್ಧಿಪಡಿಸಲಾಗುವುದು ಎಂದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಶಿ ಕುಮಾರ್, ಮಾಜಿ ಉಪಾಧ್ಯಕ್ಷ ವೆಂಕಟನಾರಾಯಣಪ್ಪ ಮುಂತಾದವರು ಉಪಸ್ಥಿತರಿದ್ದರು.