20, ಜಿಲ್ಲಾಡಳಿತ ಭವನಕ್ಕೆ ಮುಖ್ಯಮಂತ್ರಿ ಉದ್ಘಾಟನೆ
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಸೆ. 13
ನಗರದ ಹೊರ ವಲಯದ ಅಣಕನೂರು ಬಳಿ ನಿರ್ಮಿಸಿರುವ ನೂತನ ಜಿಲ್ಲಾಡಳಿತ ಭವನವನ್ನು ಸೆ.20 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ.
ನೂತನ ಜಿಲ್ಲಾಡಳಿತ ಭವನ, ಸರ್.ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ, ಚಿಕ್ಕಬಳ್ಳಾಪುರದ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ಶಂಕುಸ್ಥಾಪನೆ ಹಾಗೂ ಚಿಂತಾಮಣಿ ಮಿನಿ ವಿಧಾನಸೌಧದ 1ನೇ ಮತ್ತು 2ನೇ ಮಹಡಿಯ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮವು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದ ನಂದಿ ರಂಗಮಂದಿರದಲ್ಲಿ ಸೆ.20 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಾ.ಕೆ. ಸುಧಾಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಡಾ.ಎಂ. ವೀರಪ್ಪ ಮೊಯ್ಲಿ ಹಾಗೂ ಕೆ.ಹೆಚ್. ಮುನಿಯಪ್ಪ, ರಾಜ್ಯ ಸಚಿವರಾದ ಹೆಚ್.ಕೆ. ಪಾಟೀಲ್, ರಾಮಲಿಂಗಾರೆಡ್ಡಿ, ವಿ. ಶ್ರೀನಿವಾಸ್ ಪ್ರಸಾದ್, ಎಂ.ಹೆಚ್. ಅಂಬರೀಶ್, ದಿನೇಶ್ ಗುಂಡೂರಾವ್, ಕೆ. ಅಭಯಚಂದ್ರ, ವಿಧಾನಸಭೆ ಉಪಸಭಾಧ್ಯಕ್ಷ ಎನ್.ಹೆಚ್. ಶಿವಶಂಕರರೆಡ್ಡಿ ಮುಂತಾದವರು ಭಾಗವಹಿಸುವರು.
ಜಿ.ಪಂ. ಅಧ್ಯಕ್ಷ ಎಸ್.ಎನ್. ಚಿನ್ನಪ್ಪ, ಶಾಸಕರಾದ ಎಂ. ರಾಜಣ್ಣ, ಎಸ್.ಎನ್. ಸುಬ್ಬಾರೆಡ್ಡಿ, ಎಂ. ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಡಾ.ಎ.ಹೆಚ್. ಶಿವಯೋಗಿಸ್ವಾವು, ವೈ.ಎ.ನಾರಾಯಣಸ್ವಾಮಿ, ನಸೀರ್ಅಹಮದ್, ವೀರಯ್ಯ, ಡಾ.ಮುಮ್ತಾಜ್ ಆಲಿಖಾನ್ ಭಾಗವಹಿಸುವರು.