ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಎತ್ತಿನಹೊಳೆ ಯೋಜನೆ ವಿಳಂಬ ಮಾಡಬೇಡಿ: ಡಾ. ಶಿವಯೋಗಿಸ್ವಾವು

Mainashree
Updated On : 14 Sept 2013, 12:15 pm

ಬಂಗಾರಪೇಟೆ: ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಎತ್ತಿನಹೊಳೆ ಯೋಜನೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ನಿಗದಿತ ವೇಳೆಯಲ್ಲಿ ಅನುಷ್ಠಾನಗೊಳಿಸಬೇಕೆಂದು ವಿಧಾನಪರಿಷತ್ ಮುಖ್ಯ ಸಚೇತಕ ಡಾ. ಶಿವಯೋಗಿಸ್ವಾವು ಆಗ್ರಹಿಸಿದರು.
ಶುಕ್ರವಾರ ಪಟ್ಟಣದ ಹಲವು ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ,  ಇದೇ ತಿಂಗಳು 16ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ನೀಡುವ ಕಾರ್ಯಕ್ರಮವಿತ್ತಾದರೂ ಈಗ ಅದು ಮುಂದೂಡಿರುವುದು ಸರಿಯಲ್ಲ. ಬಯಲುಸೀಮೆ ಜಿಲ್ಲೆಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪ್ರತಿವರ್ಷ ಹಪಿಹಪಿಸುತ್ತಿದ್ದಾರೆ. ಅಂತರ್ಜಲ ಮಟ್ಟ ಕುಸಿದಿದ್ದು, ಪ್ಲೋರೈಡ್‌ಯುಕ್ತ ನೀರನ್ನು ಅನಿವಾರ್ಯವಾಗಿ ಜನರು ಕುಡಿದು ನಾನಾ ಕಾಯಿಲೆಗಳಿಗೆ ಸಿಲುಕಿದ್ದಾರೆ. ಜಿಲ್ಲೆಯಲ್ಲಿ ಸತತವಾಗಿ ಬರ ಆವರಿಸಿರುವುದರಿಂದ ಸರ್ಕಾರ ವಿಳಂಬ ಮಾಡದೆ ನಿಗದಿತ ವೇಳೆಯಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದರು.
ಈ ಯೋಜನೆಗೆ ತಕ್ಷಣ ಚಾಲನೆ ನೀಡಿದರೂ ಪೂರ್ಣಗೊಳ್ಳಲು ಸುಮಾರು 8 ವರ್ಷ ಬೇಕಾಗುತ್ತದೆ. ಆದ್ದರಿಂದ ಯೋಜನೆಯನ್ನು ತ್ವರಿತವಾಗಿ ಚಾಲನೆ ನೀಡಬೇಕೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.
ಶಾಶ್ವತ ಅನುದಾನರಹಿತ ಖಾಸಗಿ ಶಾಲೆಗಳಿಗೆ ಹಿಂದಿನ ಬಿಜೆಪಿ ಸರ್ಕಾರ 866 ಶಿಕ್ಷಣ ಸಂಸ್ಥೆಗಳಿಗೆ ಅನುದಾನಕ್ಕೆ ಒಳಪಡಿಸಲಾಗಿದ್ದು, ಅದರಲ್ಲಿ 276 ಅರ್ಹ ಸಂಸ್ಥೆಗಳಿಗೆ ಅನುದಾನವನ್ನು ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಸರ್ಕಾರ ತಕ್ಷಣ ಅನುದಾನ ನೀಡಬೇಕೆಂದು ಆಗ್ರಹಿಸಿದರು.
ನರೇಂದ್ರ ಮೋದಿ ಅವರು ಬಿಜೆಪಿ ಸರ್ವಸಮ್ಮತ ಪ್ರಧಾನ ಮಂತ್ರಿ ಅಭ್ಯರ್ಥಿ- ಬಿಜೆಪಿ ಎಲ್ಲಾ ಮುಖಂಡರ ಹಾಗೂ ಕಾರ್ಯಕರ್ತರ ಒಮ್ಮತದ ಅಭ್ಯರ್ಥಿಯಾಗಿದ್ದು, ಈ ಬಗ್ಗೆ ಯಾವುದೇ ಗೊಂದಲಗಳಿಲ್ಲ. ಮೋದಿ ಪ್ರಧಾನಿಯಾದರೆ ಮಾತ್ರ ದೇಶವನ್ನು ಕಾಡುತ್ತಿರುವ ಹಲವು ಗಂಭೀರ ಸಮಸ್ಯೆಗಳಿಗೆ ಮುಕ್ತಿ ಸಿಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ವೆಂಕಟೇಶ್ ಮೌರ್ಯ, ನರಸಿಂಹರಾಜು, ಟಿ.ಎಸ್. ನಾಗಪ್ರಕಾಶ್, ಬಿ.ಎನ್. ರಾಜಶೇಖರ್, ಬಾಲಚಂದ್ರ, ಕೀಲುಕೊಪ್ಪ ಶ್ರೀನಿವಾಸ್,ಅಮರೇಶ್, ಕಾಮಸಮುದ್ರ ಮೋಹನ್ ಮೂರ್ತಿ, ವಿಜಯಲಕ್ಷ್ಮಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement