ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನಮೋ ಪ್ರಧಾನಿ ಅಭ್ಯರ್ಥಿ: ವಿವಿಧೆಡೆ ಕಾರ್ಯಕರ್ತರ ವಿಜಯೋತ್ಸವ

Mainashree
Updated On : 14 Sept 2013, 11:48 am

ಮಾಲೂರಲ್ಲಿ ಪಟಾಕಿ ಸಿಡಿಸಿ ಸಡಗರ
ಕ.ಪ್ರ.ವಾರ್ತೆ  ಮಾಲೂರು  ಸೆ. 14
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯನ್ನು ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯ ಬಿಜೆಪಿ ಘಟಕದ ವತಿಯಿಂದ ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಪಟ್ಟಣದ ಮಾರಿಕಾಂಬ ಮಹಾದ್ವಾರದ ವೃತ್ತದಲ್ಲಿ ತಾಲೂಕು ಅಧ್ಯಕ್ಷ ಸೂ. ವೆಂಕಟೇಶ್ ನೇತೃತ್ವದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಮೋದಿ, ಅಡ್ವಾಣಿ, ವಾಜಪೇಯಿ ಪರ ಘೋಷಣೆ ಕೂಗಿದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಅಧ್ಯಕ್ಷ ವೆಂಕಟೇಶ್, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರು ಉತ್ತಮ ನಿರ್ಧಾರ ಕೈಗೊಂಡಿದ್ದಾರೆ. 2014ರ ಚುನಾವಣೆಯಲ್ಲಿ ಪಕ್ಷವು ಜಯಭೇರಿ ಬಾರಿಸಲಿದೆ ಎಂದರು.
ತಾಪಂ ಮಾಜಿ ಅಧ್ಯಕ್ಷ ಗೋಪಾಲ್ ಗೌಡ ಮಾತನಾಡಿದರು. ಪುರಸಭೆ ಸದಸ್ಯ ವೇಮನ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶೇಷಗಿರಿ, ಗೋಪಾಲ್, ವೆಂಕಟೇಶ್ ಗೌಡ, ಆಂಜಿನಪ್ಪ, ವೆಂಕಟೇಶ್, ಸೋಮೇಗೌಡ, ಮುನಿರಾಜು, ಮುರಗೇಶ್, ದೇವರಾಜರೆಡ್ಡಿ, ಬಾಬು, ಗೋಪಸಂದ್ರ ನಾರಾಯಣಸ್ವಾಮಿ,ನೂಸಗೆರೆ ಮುನಿರಾಜು, ರಮೇಶ್ ಇದ್ದರು.

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಕ.ಪ್ರ.ವಾರ್ತೆ  ಚಿಕ್ಕಬಳ್ಳಾಪುರ್ಣ ಸೆ. 14
ಬಿಜೆಪಿ ಪ್ರಚಾರ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ, ಗುಜರಾತ್ ಗುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಬಿಜೆಪಿ ಪ್ರಧಾನಿ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.
ನಗರದ ಪ್ರವಾಸಿ ಮಂದಿರದಿಂದ ಆಗಮಿಸಿ ಶಿಡ್ಲಘಟ್ಟ ವೃತ್ತದಲ್ಲಿ ಪಟಾಕಿ ಸಿಡಿಸಿದ ನಂತರ ನರೇಂದ್ರ ಮೋದಿ ಪರ ಜೈಕಾರ ಕೂಗಿದರು. ಅಲ್ಲದೆ, ಜನರಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ಗುಜರಾತ್‌ನ್ನು ಇಡೀ ದೇಶದಲ್ಲಿಯೇ ಮಾದರಿ ರಾಜ್ಯವನ್ನಾಗಿ ರೂಪಿಸುವಲ್ಲಿ ನರೇಂದ್ರ ಮೋದಿ ಅವರ ಕೊಡುಗೆ ಅಪಾರವಾದುದು. ತಮ್ಮ ಉತ್ತಮ ಆಡಳಿತ, ಯೋಜನೆಗಳ ಅನುಷ್ಠಾನದ ಮೂಲಕ ಸರ್ವಾಂಗೀಣ ಅಭಿವೃದ್ಧಿ ಕಾಣುವಂತೆ ಮಾಡಿದ್ದಾರೆ. ಈ ಬಗ್ಗೆ ವಿಶ್ವದ ಅನೇಕ ರಾಷ್ಟ್ರಗಳೇ ಮೆಚ್ಚುಗೆ ವ್ಯಕ್ತಪಡಿಸುತ್ತಿವೆ ಎಂದು ತಿಳಿಸಿದರು.
ಈಗ ದೇಶದಲ್ಲಿ ಮೋದಿ ಪರ ಅಲೆ ಎದ್ದಿದೆ. ಜನರು ಮೋದಿಯನ್ನು ಪ್ರಧಾನಿಯನ್ನಾಗಿಸಲು ಮುಂದಾಗಿದ್ದಾರೆ.
ದೇಶದಲ್ಲಿನ ಭ್ರಷ್ಟಾಚಾರ, ದುರಾಡಳಿತ, ಭಯೋತ್ಪಾದನೆ ನಿರ್ಮೂಲನೆಯಾಗಲು, ಇಡೀ ಜಗತ್ತಿನಲ್ಲಿ ಭಾರತ ದೇಶ ಮಾದರಿ ದೇಶವಾಗಿ ರೂಪುಗೊಳ್ಳಲು ಮೋದಿಗೆ ಅಧಿಕಾರ ನೀಡಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡರಾದ ಅಗಲಗುರ್ಕಿ ಚಂದ್ರಶೇಖರ್, ಶ್ರೀಕಾಂತ್ ಭಟ್, ಲಕ್ಷ್ಮೀನಾರಾಯಣ ಗುಪ್ತ, ಪ್ರೇಮಲೀಲಾ ವೆಂಕಟೇಶ್, ವರದರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.


ಸಿಹಿ ಹಂಚಿ ಸಂಭ್ರಮಾಚರಣೆ
ಶಿಡ್ಲಘಟ್ಟ: ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದಕ್ಕೆ ಪಕ್ಷದ ಕಾರ್ಯಕರ್ತರು ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು.
ಪಟ್ಟಣದ ಕೋಟೆ ವೃತ್ತದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಸುರೇಂದ್ರ ಗೌಡ ಸೇರಿದಂತೆ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ಸಂಭ್ರಮ ಆಚರಿಸಿದರು.  ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಸುರೇಂದ್ರ ಗೌಡ ಮಾತನಾಡಿ, ನರೇಂದ್ರ ಮೋದಿ ಅವರು ಪ್ರಧಾನಿ ಅಭ್ಯರ್ಥಿಯಾಗಿ ಅಯ್ಕೆಯಾಗಿರುವುದು ಒಳ್ಳೆಯ ವಿಚಾರ. ದೇಶ ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದು, ದೇಶಕ್ಕೆ ಹೊಸ ನಾಯಕತ್ವದ ಅವಶ್ಯಕತೆಯಿದೆ ಎಂದು ತಿಳಿಸಿದರು. ಶ್ರೀಧರ್, ದಾಮೋದರ್, ದಿಬ್ಬೂರಹಳ್ಳಿ ಶ್ರೀರಾಮಪ್ಪ, ನರಸಿಂಹಮೂರ್ತಿ, ರವಿ, ರಮೇಶ್, ಮುನಿರತ್ನಮ್ಮ, ರತ್ನಮ್ಮ, ಬೆಳ್ಳೂಟಿ ಸುಜಾತಮ್ಮ ಇತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement