ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಹಿಂದಿ ಭಾಷೆ ಹೇರಿಕೆ: ಪ್ರತಿಭಟನೆ

Mainashree
Updated On : 14 Sept 2013, 11:49 am

ಕೋಲಾರ: ಕೇಂದ್ರ ಸರ್ಕಾರ ಹಿಂದಿಯೇತರ ರಾಜ್ಯಗಳ ಮೇಲೆ ಬಲವಂತವಾಗಿ ಹಿಂದಿ ಭಾಷೆ ಹೇರುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದ ಸರ್ಕಾರಿ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿವರ್ಷ ಸೆ. 14ರಂದು ಹಿಂದಿ ಸಪ್ತಾಹ ದಿನವನ್ನು ಕಡ್ಡಾಯವಾಗಿ ಆಚರಿಸುಂತೆ ಕೇಂದ್ರ ಸರ್ಕಾರ ಸೂಚನೆ ನೀಡಿರುವುದು ಸರಿಯಲ್ಲ. ಇದರಿಂದ ಒಕ್ಕೂಟ ವ್ಯವಸ್ಥೆಗೆ ಹಾಗೂ ಭಾಷಾ ಸಾಮರಸ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಪ್ರತಿಭಟನಾಕಾರರು ದೂರಿದರು. ಕನ್ನಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎಂ.ಕೆ. ರಾಘವೇಂದ್ರ, ತಾಲೂಕು ಅಧ್ಯಕ್ಷ ಡಿ.ಕೆ. ಪ್ರಭಾಕರಗೌಡ, ಕೀಲುಕೋಟೆ ವಿ. ಶ್ರೀನಿವಾಸ್, ಮುದುವತ್ತಿ ಮಂಜುನಾಥ್, ನವೀನ್‌ಕುಮಾರ್, ನಟೇಶ್ ಬಾಬು, ನಂದೀಶಗೌಡ, ಕೆ.ಸಿ. ಸಂತೋಷ್, ಚಂದ್ರಶೇಖರ್, ಗೋಪಾಲಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement