ನಮೋ ಪ್ರಧಾನಿ ಅಭ್ಯರ್ಥಿ: ಕಾರ್ಯಕರ್ತರ ಹರ್ಷ
ಕ.ಪ್ರ.ವಾರ್ತೆ, ಟೇಕಲ್, ಸೆ. 16
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಗುಜರಾತ ಮುಖ್ಯಮಂತ್ರಿನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಟೇಕಲ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಆನಂದ್ ಮಾತನಾಡಿ, ಈ ಬಾರಿ ದೇಶದಲ್ಲಿ ಬಿಜೆಪಿ ಅಲೆ ಬಹುತೇಕ ಇದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದ್ದು, ನರೇಂದ್ರ ಮೋದಿಯವರು ಪ್ರಧಾನಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಜಿ. ಹಳ್ಳಿಯ ಗೋಪಾಲಕೃಷ್ಣ, ಗ್ರಾಪಂ ಮಾಜಿ ಅಧ್ಯಕ್ಷ ಪದ್ಮನಾಭಯ್ಯ, ಕ್ಷೇತ್ರೆನಹಳ್ಳಿ ಗಣೇಶ್, ಕೆ.ಜಿ.ಹಳ್ಳಿ ಮುನಿರಾಜು, ನಾರಾಯಣಸ್ವಾಮಿ, ರಾಜೇಂದ್ರ, ವೆಂಕಟೇಶ್, ಶಶಿಧರ್ ಇತರರು ಇದ್ದರು.