ಪರಿಹಾರಧನ ವಿತರಿಸಲು ಆಗ್ರಹ
ಕ.ಪ್ರ.ವಾರ್ತೆ ಮಾಲೂರು ಸೆ. 16
ತಾಲೂಕಿನ ಮಾಸ್ತಿ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಸರ್ಕಾರಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟ ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಎಂ.ವಿ. ಗೋವಿಂದರಾಜು ಅವರ ಕುಂಟುಂಬಕ್ಕೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ಅಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ತಾಲೂಕು ಅಧ್ಯಕ್ಷ ಮಾರ್ಕಂಡಯ್ಯ, ಬೆಳಗ್ಗಿನ ಜಾವ ಮಾಸ್ತಿಯಲ್ಲಿ ಮನೆ- ಮನೆಗೆ ಪೇಪರ್ ಹಾಕುವ ಗೋವಿಂದ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಸರ್ಕಾರಿ ಹಾಗೂ ಖಾಸಗಿ ಬಸ್‌ಗಳು ಪೈಪೋಟಿ ನಡೆಸುವ ಭರದಲ್ಲಿ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಮೃತ ವಿದ್ಯಾರ್ಥಿ ಕುಟುಂಬಕ್ಕೆ ಸೂಕ್ತ ಪರಿಹಾರಧನ ವಿತರಿಸಬೇಕು ಎಂದು ಆಗ್ರಹಿಸಿದರು.
ಗೋಪಿ, ಅರುಣ್‌ಕುಮಾರ್, ಮುನಿರಾಜು, ಶರತ್‌ಕುಮಾರ್, ಶಿವು, ಲೋಕೇಶ್, ಸುಬ್ರಮಣಿ, ರಾಜೇಂದ್ರ ಇದ್ದರು.