ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಪಘಾತ: ಇಬ್ಬರಿಗೆ ಗಾಯ

Mainashree
Updated On : 17 Sept 2013, 11:37 am

ಚಿಂತಾಮಣಿ: ಕೆಎಸ್ಸಾರ್ಟಿಸಿ ಬಸ್ಸೊಂದು ಅತಿ ವೇಗ ಮತ್ತು ಅಜಾಗ್ರತೆಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಕೋನಪ್ಪಲ್ಲಿ ಗೇಟ್ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ. ತಾಲೂಕಿನ ಚಿಂತಾಮಣಿ- ಶಿಡ್ಲಘಟ್ಟ ರಸ್ತೆಯ ಕೋನಪ್ಪಲ್ಲಿ ಗೇಟ್ ಬಳಿ ಕೋನಪ್ಪಲ್ಲಿ ಗ್ರಾಮದ ಸದಾನಂದಪ್ಪ ಎಂಬವರು ದ್ವಿಚಕ್ರ ವಾಹನದಲ್ಲಿ ಬರುತ್ತಿರುವಾಗ ಕೆಎಸ್ಸಾರ್ಟಿಸಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಹಿಂಬದಿಯಲ್ಲಿ ಕುಳಿತಿದ್ದ ಇಬ್ಬರೂ ತೀವ್ರ ಗಾಯಗಳಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಒಬ್ಬನ ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement