ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಿಎಂಗೆ ಘೇರಾವ್: ಎಚ್ಚರಿಕೆ

Mainashree
Updated On : 17 Sept 2013, 11:37 am

ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಶ್ವತ ನೀರಾವರಿ ಅನುಷ್ಠಾನ ವಿಚಾರದಲ್ಲಿ ಎರಡು ತಿಂಗಳೊಳಗೆ ನೀರಾವರಿ ಹೋರಾಟಗಾರರ ಸಭೆ ಕರೆಯುತ್ತೇವೆ ಎಂದು ಮುಖ್ಯಮಂತ್ರಿ ಈ ಹಿಂದೆ ಭರವಸೆ ನೀಡಿದ್ದರೂ ಇದುವರೆಗೂ ನಿರ್ಲಕ್ಷ್ಯ ಧೋರಣೆಯಿಂದ ಸಭೆ ಕರೆದಿಲ್ಲ. ಇದರಿಂದ ಸೆ. 20 ರೊಳಗೆ ನೀರಾವರಿ ಹೋರಾಟಗಾರರ ಸಭೆ ಕರೆಯಬೇಕು. ಇಲ್ಲದಿದ್ದರೆ ಸೆ. 20ರಂದು ಜಿಲ್ಲಾ ಸಂಕೀರ್ಣ ಕಟ್ಟಡ ಉದ್ಘಾಟನೆಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಘೇರಾವ್ ಹಾಕಲಾಗುವುದು ಎಂದು ನೀರಾವರಿ ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.  ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಕಳೆದ ಬಜೆಟ್‌ನಲ್ಲಿ ಎತ್ತಿನಹೊಳೆ ಯೋಜನೆಗಾಗಿ ಸಿದ್ದರಾಮಯ್ಯ ಅವರು 1 ಸಾವಿರ ಕೋಟಿ ಮೀಸಲಿಟ್ಟಿದ್ದರು. ಈ ಯೋಜನೆ ಬಗ್ಗೆ ಸ್ಪಷ್ಟ ನಿಲುವು ತೋರಬೇಕು ಎಂದು ಮನವಿ ಮಾಡಿದಾಗ ಎರಡು ತಿಂಗಳಲ್ಲಿ ನೀರಾವರಿ ಹೋರಾಟಗಾರರ ಸಭೆ ಕರೆಯುತ್ತೇನೆ ಎಂದು ಭರವಸೆ ನೀಡಿದ್ದರು. ಆದರೆ, ಇದುವರೆಗೂ ನೀರಾವರಿ ಹೋರಾಟಗಾರರ ಜೊತೆ ಸಭೆ ನಡೆಸಿಲ್ಲ ಎಂದು ಆರೋಪಿಸಿದ್ದಾರೆ.  ಮುಖಂಡರಾದ ಲಕ್ಷ್ಮೀನಾರಾಯಣರೆಡ್ಡಿ, ಚಲಪತಿ, ಸು.ಧಾ. ವೆಂಕಟೇಶ್, ಸುಷ್ಮಾ ಶ್ರೀನಿವಾಸ್, ಮಂಚನಬಲೆ ಶ್ರೀನಿವಾಸ್, ನಾರಾಯಣಸ್ವಾಮಿ, ಜೀವಿಕ ರತ್ನಮ್ಮ, ಗಂಗಾಧರ್, ರಾಮೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement