ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜನಸ್ಪಂದನ ಕಾರ್ಯಕ್ರಮ ಕಾಟಾಚಾರಕ್ಕೆ ನಡೆಯದಿರಲಿ'

Srinivasa Murthy VN
Updated On : 22 Sept 2013, 12:07 pm

ಕ.ಪ್ರ.ವಾರ್ತೆ ಬಾಗೇಪಲ್ಲಿ ಸೆ. 21
ಬಡಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಜನಸ್ಪಂದನ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಕರೆ ನೀಡಿದರು.
ತಾಲೂಕಿನ ಪಾತಪಾಳ್ಯ ಹೋಬಳಿ ಬಿಳ್ಳೂರು ಗ್ರಾಮದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ಅಡಿಯಲ್ಲಿ ಕುಂದುಕೊರತೆಗಳ ಅರ್ಜಿ ಸ್ವೀಕರಿಸುವ ಹಾಗೂ ಇತ್ಯರ್ಥ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇವಲ ಕಾಟಾಚಾರಕ್ಕೆ ಕಾರ್ಯಕ್ರಮ ಕೈಗೊಳ್ಳುವುದನ್ನು ಬಿಟ್ಟು ಜನರ ಸಮಸ್ಯೆ ಅರಿತು ಸ್ಥಳದಲ್ಲಿಯೇ ಪರಿಹಾರ ಸಿಗುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಾಗಿದೆ. ಬಡ ಜನರನ್ನು ಕಚೇರಿಗಳಿಗೆ ಅನವಶ್ಯಕವಾಗಿ ಅಲೆದಾಡಿಸಿದರೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾಗಿರುವ ಜನಸ್ಪಂದನ ಮೂಲಕ ಖುದ್ದಾಗಿ ಜನರ ಬಳಿಗೆ ಹೋಗಿ ಅರಿವು ಮೂಡಿಸಿ ಅದರ ಪ್ರಯೋಜನ ಜನರು ಪಡೆಯಲು ಶ್ರಮಿಸಬೇಕು. ಆದರೆ, ತಾಲೂಕು ಆಡಳಿತ ಈ ಕಾರ್ಯಕ್ರಮದ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವಾದ್ದರಿಂದ ಜನರು ತಮ್ಮ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮುಂಚಿತವಾಗಿಯೇ ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಆಗ ಮಾತ್ರ ತಮ್ಮ ಸಮಸ್ಯೆಗಳ ಬಗ್ಗೆ ಮನವಿ ಮಾಡಲು ಅನುಕೂಲವಾಗುತ್ತದೆ ಎಂದರು.
ಪ್ರತಿ ಗ್ರಾಮಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ರಾಜಸ್ವ ನಿರೀಕ್ಷಕರು ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಪರಿಹಾರ ಸ್ಥಳದಲ್ಲೇ ಪ್ರಾಮಾಣಿಕವಾಗಿ ಸ್ಪಂದಿಸಬೇಕೆಂದ ಅವರು, ಅನೇಕ ರಾಜಸ್ವ ನಿರೀಕ್ಷಕರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಶ್ರೀಮಂತರ ಪರ ಲಾಬಿ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಬಡವರ ಪರ ಕೆಲಸ ಮಾಡದೇ ಬಡವರಿಗೆ ಕಿರುಕುಳ ನೀಡಿದರೆ ಸರಿ ಇರುವುದಿಲ್ಲ ಎಂದರು.
ಜಿಪಂ ಸದಸ್ಯೆ ಅಮರಾವತಿ ಕೃಷ್ಣಪ್ಪ, ಗ್ರಾಪಂ ಅಧ್ಯಕ್ಷೆ ಪಾರಿಜಾತ, ತಹಸೀಲ್ದಾರ್ ಎಂ.ಎ. ಪದ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ವೆಂಕಟೇಶ್, ಸಿಡಿಪಿಒ ಲಕ್ಷ್ಮೀದೇವಮ್ಮ, ತಾಲೂಕು ಆರೋಗ್ಯಾಧಿಕಾರಿ ಡಾ. ಮಂಜೇನಾಯಕ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವನಾಗಪ್ಪ ಮುಂತಾದವರು ಇದ್ದರು.

ಇಂದು ಸ್ವಾಮಿ ವಿವೇಕಾನಂದರ ವಿಚಾರಗೋಷ್ಠಿ
ಕೋಲಾರ: ಸ್ವಾಮಿ ವಿವೇಕಾನಂದರ 150 ನೇ ಜನ್ಮ ವರ್ಷಾಚರಣೆ ಸಮಿತಿಯು ಸೆ.22 ರಂದು ಭಾನುವಾರ  ಬೆಳಿಗ್ಗೆ 10 ಗಂಟೆಗೆ ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ವಿವೇಕಾನಂದರ ವಿಚಾರ ವಾಣಿಯ ವಿಚಾರಗೋಷ್ಠಿಯನ್ನು ಹಮ್ಮಿಕೊಂಡಿದೆ.  
ಹಿರಿಯ ಪತ್ರಕರ್ತ ಕೆ. ಪ್ರಹ್ಲಾದ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಎಫ್.ಕೆ.ಸಿ.ಸಿ., ಕೆ.ಎ.ಎಸ್.ಐ.ಎ ಪೂರ್ವಅಧ್ಯಕ್ಷ ಪಿಲಿಫ್ಲೂಯಿಸ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ವಿವೇಕಾನಂದರ ದೃಷ್ಟಿಕೋನ ವೈಜ್ಞಾನಿಕತೆಯಿಂದ ಆಧ್ಯಾತ್ಮದ ಕಡೆಗೆ ಎಂಬ ವಿಷಯವನ್ನು ನಿವೃತ್ತ ಪ್ರೊಫೆಸರ್ ಆರ್. ನಾಗರಾಜು, ಆಶಯ ಮತ್ತು ಸಾಮಾಜಿಕ ಸಂವರ್ಧನೆ ಬಗ್ಗೆ ರಾಜ್ಯ ಮಾಧ್ಯಮಿಕ ಶಿಕ್ಷಣ ಸಂಘದ ಪ್ರಧಾನ ಕಾರ್ಯದರ್ಶಿ ಶಿವಾನಂದ ಶಂದನಕೇರಾ ವಿಷಯ ಮಂಡಿಸಲಿದ್ದಾರೆಂದು ಸಮಿತಿಯ ಪರವಾಗಿ ಡಾ. ಶಿವಣ್ಣ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement