ಮೂಲ ಸೌಕರ್ಯಕ್ಕೆ ಆದ್ಯತೆ: ಶಾಸಕ
ಮುಳಬಾಗಲು: ಪಟ್ಟಣದ ಎಲ್ಲಾ ವಾರ್ಡ್ಗಳಲ್ಲೂ ಹಂತಹಂತವಾಗಿ ಸಿಮೆಂಟ್ರಸ್ತೆ, ಚರಂಡಿಗಳು, ಕುಡಿಯುವ ನೀರಿನ ವ್ಯವಸ್ಭೆ ಮಾಡಿಸುವುದಾಗಿ ಶಾಸಕ ಕೊತ್ತೂರು ಮಂಜುನಾಥ್ ನುಡಿದರು.
ಪಟ್ಟಣದ ಎಂ.ಸಿ.ರಸ್ತೆಯ ಅಂಬೇಡ್ಕರ್ ವೃತ್ತದಿಂದ ಟಿಎಪಿಸಿಎಂಎಸ್ ವೃತ್ತದ ವರೆವಿಗೂ 50 ಲಕ್ಷ ವರೆವಿಗೂ ಕಾಮಗಾರಿ ಭೂಮಿಪೂಜೆ ಮಾಡಿ ಮಾತನಾಡಿದ ಅವರು, ರಸ್ತೆ ಕಾಮಗಾರಿಗಳ ಗುಣಮಟ್ಟ ಕಾಪಾಡಲು ಕೋರಿದರು.
ಕಳಪೆ ಕಾಮಗಾರಿ ಅವಕಾಶವಿಲ್ಲ: ಯಾವುದೇ ಕಾರಣಕ್ಕೂ ಕಳಪೆ ಕಾಮಗಾರಿಗಳಿಗೆ ಅವಕಾಶ ನೀಡಕೂಡದೆಂದು ತಾಖೀತು ಮಾಡಿದರು. ಫುಟ್ಪಾತ್ ತೆರವುಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡಲು ಕರೆ ನೀಡಿದ ಅವರು ಬಸ್ನಿಲ್ದಾಣಕ್ಕೆ ಉತ್ತಮ ಸಂಪರ್ಕ ರಸ್ತೆ ಕಲ್ಪಸುಪುದಾಗಿ ನುಡಿದರು.
ಮುಖಂಡ ಕಲ್ಲುಪಲ್ಲಿ ಪ್ರಕಾಶ್, ಪುರಸಭೆ ಸದಸ್ಯರಾದ ಗೋಪಿ, ಪುರಸಭೆ ಮಾಜಿ ಅಧ್ಯಕ್ಷ ಯಾಮಣ್ಣ, ಪುರಸಭೆ ಮುಖ್ಯಾಧಿಕಾರಿ ಅಶೋಕ್ ಮುಂತಾದವರು ಭಾಗವಹಿಸಿದ್ದರು.
ಅತ್ಯಾಚಾರ ಆರೋಪಿ ಪರಾರಿ
ಕೋಲಾರ: ಚಿಂತಾಮಣಿ ತಾಲೂಕಿನ ನಯಾಂಡಹಳ್ಳಿ ಗ್ರಾಮದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಪೊಲೀಸರಿಂದ ತಪ್ಪಿಸಿಕೊಂಡಿರುವ ಘಟನೆ ಚಿಂತಾಮಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಎರಡು ದಿನದ ಹಿಂದೆ ಶ್ರೀನಿವಾಸಪುರ ತಾಲೂಕಿನ ಉಪ್ಪಕುಂಟೆ ಗ್ರಾಮದ ನಾಗರಾಜು ಎಂಬಾತ ನಯಾಂಡಹಳ್ಳಿಯ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ದೂರು ದಾಖಲು ಆಗಿತ್ತು.
ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದ ಸಂದರ್ಭದಲ್ಲಿ ಆರೋಪಿ ಮೂತ್ರ ವಿಸರ್ಜನೆ ನೆಪದಲ್ಲಿ ಪೊಲೀಸರಿಗೆ ಕೈಕೊಟ್ಟು ಪರಾರಿಯಾಗಿದ್ದಾನೆ. ಆರೋಪಿಯ ಬಂಧನಕ್ಕೆ ಶೋಧನೆ ನಡೆದಿದೆಯಲ್ಲದೆ, ಕರ್ತವ್ಯ ಲೋಪ ಎಸಗಿರುವ ಪೊಲೀಸರ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಗಳು ವಿಚಾರಣೆ ಕೈಗೊಂಡಿದ್ದಾರೆ.
ಖಾಸಗಿ ಬಸ್ ಪಲ್ಟಿ; 20 ಮಂದಿಗೆ ಗಾಯ
ಚಿಂತಾಮಣಿ: ತಾಲೂಕಿನ ಕಾಗತ್ತಿ ಗ್ರಾಮದ ಬಳಿ ಸೋಮವಾರ ರಾತ್ರಿ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯೊಡೆದ ಪರಿಣಾಮ, ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಇಲ್ಲಿನ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.