ದೇಶದ ಅಭಿವೃದ್ಧಿಗೆ ಬಿಜೆಪಿಗೇ ಮತ ನೀಡಿ: ಸುರೇಂದ್ರಗೌಡ
ಶಿಡ್ಲಘಟ್ಟ: ದೇಶದ ಸರ್ವತೋಮುಖ ಅಭಿವೃದ್ಧಿ ಮತ್ತು ಬಯಲು ಸೀಮೆಯ ಪ್ರದೇಶಗಳಿಗೆ ಶಾಶ್ವತ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲು ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಬೇಕೆಂದು ತಾಲೂಕು ಬಿಜೆಪಿ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ ಮತದಾರರಲ್ಲಿ ಮನವಿ ಮಾಡಿದರು.
ದಿಬ್ಬೂರಹಳ್ಳಿ ಗ್ರಾಪಂ ಬೈಯಪ್ಪನಹಳ್ಳಿ ಗ್ರಾಮದಲ್ಲಿ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ 30 ವರ್ಷಗಳಿಂದ ಸಂಸದರಾಗಿ, ಸಚಿವರಾಗಿ ಬಯಲು ಸೀಮೆಯ ಭಾಗಗಳಿಗೆ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಾಗದ ವ್ಯಕ್ತಿಗೆ ಮತ್ತೊಮ್ಮೆ ಅಧಿಕಾರ ಕೊಡುವುದರಲ್ಲಿ ಅರ್ಥವಿಲ್ಲ. ಕ್ಷೇತ್ರದ ಜನತೆಯ ಮನದಾಳದ ಸಂಕಷ್ಟವನ್ನು ಅರಿಯುವ ವ್ಯಕ್ತಿಯನ್ನು ಆರಿಸಿ ಸಂಸತ್ತಿಗೆ ಕಳುಹಿಸಬೇಕಾದ ಅನಿವಾರ್ಯತೆ ನಿಮ್ಮ ÈÚßßM¦¥æ’ ಎಂದರು.
ಬಿಜೆಪಿ ಮುಖಂಡ ಶಿವಕುಮಾರಗೌಡ ಮಾತನಾಡಿ, “«ÚÁæÞM¥Úà ಮೋದಿಯವರು ಈ ದೇಶದ ಪ್ರಧಾನಿಯಾದರೆ ದೇಶದಲ್ಲಿ ನಿರುದ್ಯೋಗದ ಸಮಸ್ಯೆಯನ್ನು ಬಗೆಹರಿಸುವುದರ ಜೊತೆಗೆ ಈ ಭಾಗದ ನೀರಿನ ಸಮಸ್ಯೆ ಕೂಡಾ ¶VæÔÚ¾Ú߯¥æ’ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಜಯಕುಮಾರ್ ನೇತೃತ್ವದಲ್ಲಿ ಮೂವತ್ತಕ್ಕೂ ಹೆಚ್ಚು ಮಂದಿ ವಿವಿಧ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿಯ ತಾಲೂಕು ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಶ್ರೀಧರ್, ಕೆಂಪರೆಡ್ಡಿ, ಬೈಯಪ್ಪನಹಳ್ಳಿ ವಿಜಯಕುಮಾರ್, ಮುನಿಕೃಷ್ಣಪ್ಪ, ರವಿಕುಮಾರ್, ನರೇಶ್, ಹಂಡಿಗನಾಳ ಪ್ರಕಾಶ್ ಹಾಜರಿದ್ದರು.