ಷರೀಫ್ ಜೆಡಿಎಸ್ ಸೇರ್ತಾರೆ: ಜಮೀರ್
ಬಾಗೇಪಲ್ಲಿ: ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಜಾಫರ್ ಷರೀಫ್ ಮೆಕ್ಕಾದಿಂದ ಬಂದ ತಕ್ಷಣ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂದು ಜೆಡಿಎಸ್ ನಾಯಕ, ಶಾಸಕ ಜಮೀರ್ ಅಹ್ಮದ್ ಹೇಳಿದರು.
ಪಟ್ಟಣಕ್ಕೆ ಸಮೀಪದಲ್ಲಿರುವ ತಾಲ್ಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಗಡಿದಂ ಲಕ್ಷ್ಮೀವೆಂಕಟೇಶ್ವರ ದೇವಾಲಯದಲ್ಲಿ ಕುಮಾರಸ್ವಾಮಿ ಗೆಲವಿಗಾಗಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, 'ರಾಜ್ಯದ ಎಲ್ಲ ಲೋಕಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿ, ಮತಯಾಚನೆ ಮಾಡಲಿದ್ದಾರೆ' ಎಂದರು.