ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕೆಜಿಎಫ್ನಲ್ಲಿ ಮತದಾನ ಜಾಗೃತಿ

Rashmi Kasaragodu
Updated On : 4 Apr 2014, 2:20 am

ಕೆಜಿಎಫ್: ಕ್ಷೇತ್ರದ ಮತದಾರಲ್ಲಿ ಮತ ಚಲಾಯಿಸುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ಸಹಾಯಕ ಚುನಾವಣಾಧಿಕಾರಿ ಜಗದೀಶ್ ನೇತೃತ್ವದಲ್ಲಿ ನಗರದ ಗಾಂಧಿ ವೃತ್ತದಲ್ಲಿ ಆಯೋಜಿಸಲಾಗಿತ್ತು. ದೇಶದ ಅಬಿವೃದ್ಧಿಗೆ ಎಲ್ಲಾ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಸಾರ್ವಜನಿಕರಲ್ಲಿ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಿದರು.
  ಈ ವೇಳೆ ಮಾತನಾಡಿದ ಸಹಾಯಕ ಚುನಾವಣಾಧಿಕಾರಿ ಜಗದೀಶ್, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಿ ಕಡಿಮೆ ಮತ ಚಲಾಯಿಸಿದ ಬೂತ್ಗಳಲ್ಲಿ ಬೀದಿ ನಾಟಕದ ಮೂಲಕ ವಿದ್ಯಾರ್ಥಿಗಳು, ಯುವಕರು ಕಡ್ಡಾಯವಾಗಿ ಮತ ಹಾಕಬೇಕು ಎಂಬುದರ ಬಗ್ಗೆ ಅವರಲ್ಲಿ ಅರಿವು ಮೂಡಿಸಲಾಗುವುದು ಎಂದರು. ನಗರಸಭಾ ಆಯುಕ್ತ ವಿ. ಬಾಲಚಂದ್ರ, ಫ್ಲೈಯಿಂಗ್ ಸ್ಕ್ವಾಡ್ ಮತ್ತು ಸೆಕ್ಟಾರ್ ಅಧಿಕಾರಿಗಳಾದ ಭೀಮನೀಡಿ, ರಘುರಾಮ್ಸಿಂಗ್ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement