ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಚಿಕ್ಕಬಳ್ಳಾಪುರದಲ್ಲಿ ಮತದಾನ ಜಾಗೃತಿ

Rashmi Kasaragodu
Updated On : 4 Apr 2014, 2:22 am

ಚಿಕ್ಕಬಳ್ಳಾಪುರ: ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸ್ವೀಪ್ ಕಾರ್ಯಕ್ರಮದಡಿ ಆಯೋಜಿಸಿರುವ ಮತದಾನದ ಅರಿವಿನ ಛಾಯಾಚಿತ್ರ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ  ಡಾ.ಆರ್. ವಿಶಾಲ್ ಗುರುವಾರ ಚಾಲನೆ ನೀಡಿದರು.
ಕೇಂದ್ರ ಸರ್ಕಾರದ ಜಾಹೀರಾತು ಮತ್ತು ದೃಶ್ಯ ಪ್ರಚಾರ ನಿರ್ದೇಶನಾಲಯ ವತಿಯಿಂದ ನಗರದ ಡಾ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಏ.3 ರಿಂದ 5 ರ ವರೆಗೆ 3 ದಿನಗಳ ಕಾಲ ಮತದಾನ ಜಾಗೃತಿಯ ಛಾಯಾಚಿತ್ರ ಪ್ರದರ್ಶನ ಹಮ್ಮಿಕೊಂಡಿದ್ದು ಚುನಾವಣಾ ಆಯೋಗ ನೀಡಿರುವ ಸಂದೇಶಗಳು, ಮತದಾನದ ಕುರಿತು ಜಾಗೃತಿ ಮೂಡಿಸುವ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.
ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್, ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹೆಚ್ಚಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿರುವುದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಮತದಾನ ಮಾಡುವುದಲ್ಲದೇ ಇತರರಲ್ಲೂ ಅರಿವು ಮೂಡಿಸಬೇಕೆಂದು ಸಲಹೆ ನೀಡಿದರು.
ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ಮಾತನಾಡಿ, ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸ್ವೀಪ್ ಅಡಿಯಲ್ಲಿ ಬೀದಿನಾಟಕಗಳು, ಧ್ವನಿವರ್ಧಕಗಳ ಮೂಲಕ ಸ್ವೀಪ್ ಸಂದೇಶ ಪ್ರಚಾರ, ಮೇಣದ ದೀಪದ ನಡಿಗೆ, ಮ್ಯಾರಾಥಾನ್ ಓಟ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಕ್ಷೇತ್ರಾದಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ. ಇಲ್ಲಿ ಸಾರುವುದು ಒಂದೇ ಸಂದೇಶ, ಎಲ್ಲರೂ ಮತದಾನ ಮಾಡಿ ಎಂಬುದೇ ಆಗಿದೆ ಎಂದರು.
ಪ್ರದರ್ಶನಲ್ಲಿ ಮತಯಂತ್ರ  ಬಳಕೆಯ ಬಗ್ಗೆ ಪ್ರಾತ್ಯಕ್ಷಿಕತೆ ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಪ್ರಚಾರ ಅಧಿಕಾರಿ ಪಿ.ಜಿ. ಪಾಟೀಲ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಕೆ.ಎನ್. ಕವನ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement