ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜೆಡಿಎಸ್ ಅಭ್ಯರ್ಥಿ ಗೆಲವಿಗೆ ಕರೆ

Rashmi Kasaragodu
Updated On : 4 Apr 2014, 2:21 am

ಕೆಜಿಎಫ್ನಲ್ಲಿ ಶಾಸಕ ಕೃಷ್ಣಾರೆಡ್ಡಿ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ


ಚಿಂತಾಮಣಿ: ಜನಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಜೆಡಿಎಸ್ ಅಭ್ಯರ್ಥಿ ಕೆ.ಕೇಶವ್ ಅವರನ್ನು ಬಹುಮತ ನೀಡಿ ಗೆಲ್ಲಿಸಬೇಕೆಂದು ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಹೇಳಿದರು.
ನಗರದ ಜೆಡಿಎಸ್ ಕಾರ್ಯಾಲಯದಲ್ಲಿ ಮುಂಗಾನಹಳ್ಳಿ ಹೋಬಳಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಮೂಲಭೂತ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಲು  ಜೆಡಿಎಸ್ ಬೆಂಬಲಿಸಬೇಕು. ಅಲ್ಲದೆ, ಕೇಶವ ಅವರ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಟಿ.ಎನ್.ರಾಜಗೋಪಾಲ್, ನಗರಸಭಾ ಅಧ್ಯಕ್ಷ ಜಿಯಾವುಲ್ಲಾ ರೆಹಮಾನ್, ನಗರಸಭಾ ಸದಸ್ಯರಾದ ಡಿ.ಸಾದಪ್ಪ, ಮುಖಂಡರಾದ ಯನುಮಲಪಾಡಿ ಚಂದ್ರಾರೆಡ್ಡಿ, ಪೆದ್ದೂರು ನಾಗರಾಜರೆಡ್ಡಿ, ಬೊಮ್ಮನಹಳ್ಳಿ ವೆಂಕಟರೆಡ್ಡಿ, ಮಸಲಹಳ್ಳಿ ಮಂಜುನಾಥ್, ರಾಚಾಪುರ ಶ್ರೀನಿವಾಸ್, ಕೃಷ್ಣೋಜಿರಾವ್, ಕೃಷ್ಣಮೂರ್ತಿ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement