ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಯುಪಿಎ ದುರಾಡಳಿತಕ್ಕೆ ತೆರೆ ಕಾಲ ಸನ್ನಿಹಿತ: ಬಚ್ಚೇಗೌಡ

Rashmi Kasaragodu
Updated On : 4 Apr 2014, 2:20 am

ಗುಡಿಬಂಡೆ: ಭ್ರಷ್ಟಾಚಾರದಲ್ಲಿ ನಂ.1 ಸ್ಥಾನ ಪಡೆದಿರುವ ಯುಪಿಎ ದುರಾಡಳಿತಕ್ಕೆ ತೆರೆ ಬೀಳುವ ಕಾಲ ಸನ್ನಿಹಿತವಾಗಿದೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಹೇಳಿದರು.
ಪಟ್ಟಣದಲ್ಲಿ ಬಿಜೆಪಿ ಕಚೇರಿಯನ್ನು ಉದ್ಘಾಟಿಸಿದ ಬಳಿಕ ರೋಡ್ ಶೋ ಮೂಲಕ ಮತಯಾಚಿಸಿದ ಅವರು, ನನ್ನನ್ನು ಸೋಲಿಸಲು ಜೆಡಿಎಸ್- ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿವೆ. ಆದರೆ, ವಲಸೆ ಬಂದ ಹಕ್ಕಿಗಳಾದ ಕುಮಾರಸ್ವಾಮಿ ಮತ್ತು ವೀರಪ್ಪ ಮೊಯ್ಲಿ ಅವರಿಂದ ನನ್ನ ಗೆಲುವಿಗೆ ಯಾವುದೇ ಅಡ್ಡಿಯಿಲ್ಲ. ಮೊಯ್ಲಿ ಕೇಂದ್ರದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದವರು. ಆದರೆ, ಕ್ಷೇತ್ರದಲ್ಲಿ ಬಡತನ, ನಿರುದ್ಯೋಗ ಸಮಸ್ಯೆಗಳ ಪ್ರಮಾಣ ಹೆಚ್ಚಿದೆಯೇ ಹೊರತು ಕಡಿಮೆಯಾಗಿಲ್ಲ' ಎಂದು ಆರೋಪಿಸಿದರು.
ನಂತರ ಮಾತನಾಡಿದ ಬಿಜೆಪಿ ಮುಖಂಡ ಡಿ.ಜೆ.ನಾಗರಾಜರೆಡ್ಡಿ, 'ಭಾರತ ದೇಶದ ಅಪಾರ ಸಂಪತ್ತನ್ನು ಸೋನಿಯಾ ಗಾಂಧಿ ಸ್ವಿಸ್ ಬ್ಯಾಂಕ್ನಲ್ಲಿಟ್ಟಿದ್ದಾರೆ. ಹಿಂದಿನ ಲೋಕಸಭಾ ಚುನಾವಣಾ ಸಮಯದಲ್ಲಿ ಮೊಯ್ಲಿ ನೀಡಿದ ಎಲ್ಲ ಭರವಸೆಗಳೂ ಸಹ ಭರವಸೆಗಳಾಗಿಯೆ ಉಳಿದಿವೆ' ಎಂದು ಆರೋಪಿಸಿದರು. ಈ ವೇಳೆ ಬಿಜೆಪಿ ಮುಖಂಡರಾದ ಜಿ.ಎಸ್.ನಾಗರಾಜ್, ಅಂಬರೀಶ್, ನಾರಾಯಣಸ್ವಾಮಿ, ಚೌಡರೆಡ್ಡಿ, ಗೂಳೂರು ಲಕ್ಷ್ಮೀನಾರಾಯಣ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement