ಆಕಸ್ಮಿಕ ಬೆಂಕಿ: ಅಪಾರ ನಷ್ಟ
ಮುಳಬಾಗಲು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ತಾಲೂಕಿನ ಆವಣಿ ಗ್ರಾಮದಲ್ಲಿ ಮೂರು ಮನೆಗಳಿಗೆ ಬೆಂಕಿ ಬಿದ್ದು ಅಪಾರ ನಷ್ಟವಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ನಾರಾಯಣಮ್ಮ, ಗೀತಮ್ಮ, ಸುಮಂತಮ್ಮ ಎಂಬುವರ ಗುಡಿಸಲು ಮನೆಗಳ ಮೇಲೆ ವಿದ್ಯುತ್ 11 ಕೆ.ವಿ. ಸಾಮರ್ಥ್ಯದ ತಂತಿಗಳು ಹಾದು ಹೋಗಿದ್ದು, ಆಕಸ್ಮಿಕ ಬೆಂಕಿಯಿಂದ ಮನೆಯಲ್ಲಿದ್ದ ವಸ್ತುಗಳು ಭಸ್ಮವಾಗಿದೆ. ತಕ್ಷಣ ಧಾವಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿತು. ನಷ್ಟ ಪರಿಹಾರಕ್ಕೆ ಒತ್ತಾಯಿಸಲಾಗಿದೆ.