ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕಾಂಗ್ರೆಸ್ನಿಂದ ಸಾಮಾಜಿಕ ನ್ಯಾಯ

Rashmi Kasaragodu
Updated On : 5 Apr 2014, 2:23 am

ಕೆ.ಎಚ್.ಮುನಿಯಪ್ಪ ಹೇಳಿಕೆ, ಕಾಂಗ್ರೆಸ್ ಚುನಾವಣಾ ಪ್ರಚಾರ


ಶಿಡ್ಲಘಟ್ಟ: ಎಲ್ಲ ಜಾತಿ ಧರ್ಮಗಳನ್ನು ಸಮಾನವಾಗಿ ಕೊಂಡೊಯ್ಯುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್. ಮುನಿಯಪ್ಪ ಹೇಳಿದರು.
ತಾಲೂಕಿನ ಅಬ್ಲೂಡು ಗ್ರಾಮದಲ್ಲಿ ನಡೆಸಿದ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, ಬಿಜೆಪಿ ಕೇವಲ ಒಂದು ಧರ್ಮಕ್ಕೆ ಮಾತ್ರ ಸೀಮಿತವಾಗದೆ. ಕೋಲಾರ ಕ್ಷೇತ್ರದಲ್ಲಿ ನೇರ ಸ್ಪರ್ಧೆ ಇರುವುದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ. ಕಾಂಗ್ರೆಸ್ ನಿರಾಯಾಸವಾಗಿ ಗೆಲುವು ಸಾಧಿಸಲಿದೆ ಎಂದರು. ಮಾಜಿ ಸಚಿವ ವಿ. ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಬಿಟ್ಟರೆ ಯಾವುದೇ ಪಕ್ಷದಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಕೋಮುವಾದಿ ಪಕ್ಷಕ್ಕೆ ಮತ ನೀಡಬೇಡಿ, ಜೆಡಿಎಸ್ ಸಂಪೂರ್ಣವಾಗಿ ಕುಸಿಯುವ ಮಟ್ಟಕ್ಕೆ ತಲುಪಿದ್ದು, ಸೋಲಿನ ಸರಣಿ ಜೆಡಿಎಸ್ಗೆ ಅಂಟಿಕೊಂಡಿದೆ. ಸೋಲಿನ ಭಯದಿಂದಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಮನಗರದಿಂದ ಪಲಾಯನ ಮಾಡಿ ಚಿಕ್ಕಬಳ್ಳಾಪುರಕ್ಕೆ ಬಂದಿದ್ದಾರೆ. ಇಲ್ಲಿಯೂ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ದೊಡ್ಡತೇಕಹಳ್ಳಿ, ಬಶೆಟ್ಟಿಹಳ್ಳಿ, ದಿಬ್ಬೂರಹಳ್ಳಿ, ಸಾದಲಿ, ಗಂಜಿಗುಂಟೆ ಗ್ರಾಪಂಗಳ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದರು. ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ ಕೆ. ಗುಡಿಯಪ್ಪ, ಜಿಪಂ ಸದಸ್ಯರಾದ ಎಸ್.ಎಂ. ನಾರಾಯಣಸ್ವಾಮಿ, ಕಂಬದಹಳ್ಳಿ ಸತೀಶ್, ಶ್ರೀನಿವಾಸ್, ಚೀಮನಹಳ್ಳಿ ಗೋಪಾಲ್, ಭಕ್ತರಹಳ್ಳಿ ಮುನೇಗೌಡ ಇದ್ದರು.


'ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಬಿಜೆಪಿ ಬೆಂಬಲಿಸಿ'


ಶಿಡ್ಲಘಟ್ಟ: ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಬಿಜೆಪಿ ಬೆಂಬಲಿಸಿ ಎಂದು ಬಿಜೆಪಿ ಮುಖಂಡ ಡಿ.ಆರ್. ಶಿವಕುಮಾರಗೌಡ ಮತದಾರರಲ್ಲಿ ಮನವಿ ಮಾಡಿದರು.
ತಾಲೂಕಿನ ಆನೆಮಡಗು ಗ್ರಾಮದಲ್ಲಿ ವಿವಿಧ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಯಾದ ಕಾರ್ಯಕರ್ತರಿಗೆ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ, ದೇಶದಲ್ಲಿ ನರೇಂದ್ರಮೋದಿಯವರ ಅಲೆಯಿದೆ, ಬಯಲು ಸೀಮೆ ಭಾಗಗಳಿಗೆ ಅವಶ್ಯವಾಗಿರುವ ನೀರಾವರಿ ಯೋಜನೆಗಳ ಸಾಕಾರಕ್ಕಾಗಿ ಈ ಭಾರಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು. ತಾಲೂಕು ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಶ್ರೀಧರ್, ಕೆಂಪರೆಡ್ಡಿ, ಪ್ರಕಾಶ್, ಮುನಿಕೃಷ್ಣಪ್ಪ, ಬೈಯಪ್ಪನಹಳ್ಳಿ ವಿಜಯಕುಮಾರ್ ಇದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement