ಸಿಎಂ ಹೇಳಿಕೆಗೆ ಖಂಡನೆ
ಶಿಡ್ಲಘಟ್ಟ: ರೈತನನ್ನು ಅವಹೇಳನ ಮಾತನಾಡಿದ ಸಿಎಂ ಸಿದ್ದರಾಮಯ್ಯ ರೈತರ ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಮುಖಂಡ ಮಳ್ಳೂರು ಹರೀಶ್ ಮಾತನಾಡಿ, ರೈತನ ಬಗ್ಗೆ ಬಾಯಿಗೆ ಬಂದ ಹಾಗೇ ಮಾತನಾಡುತ್ತಿರುವ ಮುಖ್ಯ ಮಂತ್ರಿಗಳ ವರ್ತನೆಯನ್ನು ಖಂಡಿಸಿದರು. ಏ.10 ರ ಒಳಗೆ ಮುಖ್ಯಮಂತ್ರಿಗಳು ರೈತರನ್ನು ಕ್ಷಮೆ ಕೇಳಬೇಕು ಇಲ್ಲವಾದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಭಕ್ತರ ಹಳ್ಳಿ ಭೈರೇಗೌಡ, ಉಪಾಧ್ಯಕ್ಷ ಆಂಜನೇಯರೆಡ್ಡಿ, ಮುನಿನಂಜಪ್ಪ ಸೇರಿ ಇತರರು ಇದ್ದರು.