ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜೆಡಿಎಸ್ ಅಪ್ಪ ಮಕ್ಕಳ ಪಕ್ಷ: ಬಚ್ಚೇಗೌಡ

Rashmi Kasaragodu
Updated On : 6 Apr 2014, 1:28 am

ಬಾಗೇಪಲ್ಲಿ: ಚುನಾವಣೆ ಸಮಯದಲ್ಲಿ ಟಿಕೆಟ್ ಮಾರಾಟ ಮಾಡುವ ಮೂಲಕ ಲೂಟಿ ಮಾಡುತ್ತಿರುವ ಅಪ್ಪ ಮಕ್ಕಳ  ಪಕ್ಷ ಜೆಡಿಎಸ್ ಪಾರ್ಟಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯಥಿ ಬಿ.ಎನ್. ಬಚ್ಚೇಗೌಡ ಟೀಕಿಸಿದರು.
ತಾಲೂಕಿನ ಗೂಳೂರು ಹೋಬಳಿ ಕೇಂದ್ರದಲ್ಲಿ ಮತಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದೆ ಎಂದು ನೇರವಾಗಿ ಆರೋಪಿಸಿದ ಅವರು,  ರಾಮನಗರ ನನ್ನ ಜನ್ಮ ಭೂಮಿ, ಕರ್ಮ ಭೂಮಿ, ಪುಣ್ಯ ಭೂಮಿ. ನಾನು ಎಂದಿಗೂ ರಾಮನಗರ ಬಿಟ್ಟು ಹೋಗುವುದಿಲ್ಲ ಎಂದು ಹೇಳಿಕೊಂಡಿದ್ದ ಕುಮಾರಸ್ವಾಮಿ ಕೊನೆಗಳಿಗೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ನನಗೆ ಪ್ರತಿಸ್ಪರ್ಧಿಯಾಗಿ ಕಣಕ್ಕೆ ಇಳಿದಿದ್ದಾರೆ. ಆದರೆ ಅವರು ಈ ಕ್ಷೇತ್ರದಲ್ಲಿ ಸೋಲುವುದು ಖಚಿತ ಎಂದರು.
ಕಳೆದ ಚುನಾವಣೆಯಲ್ಲಿ ಕೈಗಾರಿಗೆ ಶಾಶ್ವತ ನೀರಾವರಿ ಅನುಷ್ಠಾನ, ನಿರುದ್ಯೋಗ ಸಮಸ್ಯೆ ನಿವಾರಣೆ ಸೇರಿದಂತೆ ಅನೇಕ ಭರವಸೆಗಳನ್ನು ನೀಡಿದ್ದರು. ಆದರೆ ಅವರು ನೀಡಿದ್ದ ಭರವಸೆಗಳು ಭರವಸೆಗಳಾಗಿಯೇ ಉಳಿದಿವೆ ಎಂದು ಟೀಕಿಸಿದರು. ಬಲಿಜಿಗ ಸಂಘದ ರಾಜ್ಯಾಧ್ಯಕ್ಷ ಎಂ.ಸಿ. ವೇಣು ಗೋಪಾಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ವಿ. ಚೌಡರೆಡ್ಡಿ, ತಾಲೂಕು ಅಧ್ಯಕ್ಷ ಗೂಳೂರು ಲಕ್ಷ್ಮೀನಾರಾಯಣ, ಜಿ.ವಿ. ಕೃಷ್ಣಯ್ಯ ಇದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement