ಜೆಡಿಎಸ್ ಅಭ್ಯರ್ಥಿ ಕೆ. ಕೇಶವ್ ಹಲವು ಪ್ರಕರಣಗಳ ಆರೋಪಿ: ಅಶೋಕ ವಾಗ್ದಾಳಿ
ಕನ್ನಡಪ್ರಭ ವಾರ್ತೆ, ಚಿಂತಾಮಣಿ, ಏ.5
ಜೆಡಿಎಸ್ ಅಭ್ಯರ್ಥಿ ಕೆ.ಕೇಶವ್ ಅವರು ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ಆಂಧ್ರಕ್ಕೆ ಸೇರಿದ ಇವರನ್ನು ಜೆಡಿಎಸ್ ಕರ್ನಾಟಕದಲ್ಲಿ ಅಭ್ಯರ್ಥಿಯಾಗಿಸಿದ್ದು, ಗಮನಿಸಿದರೆ ಅವರಿಗೆ ಅಭ್ಯರ್ಥಿಗಳ ಕೊರತೆ ಇದೆ ಎಂದು ಮಾಜಿ ಡಿಸಿಎಂ, ಬಿಜೆಪಿಯ ಪ್ರಮುಖ ನಾಯಕ ಆರ್.ಅಶೋಕ ಲೇವಡಿ ಮಾಡಿದರು.
ನಗರದ ವಾಲ್ಮೀಕಿ ವೃತ್ತದಿಂದ ಸ್ಥಳೀಯ ಬಿಜೆಪಿ ನೂರಾರು ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿ, ನಂತರ ಕೋಲಾರ ಲೋಕಸಭಾ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಪರ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮತಯಾಚಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಹಾಗೂ ಜೆಡಿಎಸ್ ಅಭ್ಯರ್ಥಿ ಕೆ.ಕೇಶವ್ ಒಂದೇ ನಾಣ್ಯದ 2 ಮುಖಗಳು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೆ.ಹೆಚ್.ಮುನಿಯಪ್ಪನವರಿಗೆ ಒಡನಾಟ ಚೆನ್ನಾಗಿದೆ. ಕೆ.ಎಚ್.ಎಂ ಕೃಪಾ ನಾಟಕ ಮಂಡಳಿಯಲ್ಲಿ ಕೆ.ಕೇಶವ್ ಒಬ್ಬ ಪಾತ್ರದಾರಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಕೆಜಿಎಫ್ನ ಮಾಜಿ ಶಾಸಕ ವೈ.ಸಂಪಂಗಿ ಇದ್ದರು.