ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜೆಡಿಎಸ್ ಗೆಲವು ನಿಶ್ಚಿತ: ಮನೋಹರ್

Rashmi Kasaragodu
Updated On : 6 Apr 2014, 1:27 am

ಗುಡಿಬಂಡೆ: ಚಿಕ್ಕಬಳ್ಳಾಪುರ ಲೋಕ ಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಚ್.ಡಿ. ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಂ.ಸಿ. ಮನೋಹರ್ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಅಶ್ವತ್ಥಪ್ಪ ಮಠದಲ್ಲಿ ಪೂಜೆ ಸಲ್ಲಿಸಿ ಮಾತನಾಡಿ, ರಾಜ್ಯದಲ್ಲಿ ಕುಮಾರ ಸ್ವಾಮಿ ಮುಖ್ಯ ಮಂತ್ರಿಯಾಗಿದ್ದ ಅವಧಿಯಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಹೀಗಾಗಿ ರಾಜ್ಯದ ಜನತೆಯಿಂದ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ.
 ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳು ಹೀನಾಯವಾಗಿ ಸೋಲಲಿದ್ದಾರೆಂದು ನುಡಿದರು. ಪಕ್ಷದ ತಾಲೂಕು ಅಧ್ಯಕ್ಷ ಭಾಸ್ಕರ ರೆಡ್ಡಿ, ರಿಯಾಜ್ ಪಾಷ, ಅಪ್ಸರ್, ಆನಂದ್, ಎ. ನಾಗರಾಜ್, ವೆಂಕಟೇಶಪ್ಪ ಇದ್ದರು.


ನಗರ ಪ್ರದೇಶದಲ್ಲಿ ಜೆಡಿಎಸ್ ಬಿರುಸಿನ ಪ್ರಚಾರ


ಕೋಲಾರ: ಜೆಡಿಎಸ್ ಅಭ್ಯರ್ಥಿ ಕೇಶವ ಪರ ಕೋಲಾರದ 7 ಮತ್ತು 8ನೇ ವಾರ್ಡಿನಲ್ಲಿ ಶನಿವಾರ ಪ್ರಚಾರ ನಡೆಯಿತು.
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ರಾಮರಾಜು ಪ್ರಚಾರಕ್ಕೆ ಚಾಲನೆ ನೀಡಿದರು. ವಾರ್ಡುಗಳಿಗೆ ಭೇಟಿ ನೀಡುವ ಮುನ್ನ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ನಂತರ ವಾರ್ಡಿನಲ್ಲಿ ಪಾದಯಾತ್ರೆ ನಡೆಸಿ ಕರಪತ್ರಗ ಹಂಚುವ ಮೂಲಕ ಜೆಡಿಎಸ್ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಲಾಯಿತು. ಮೂರಂಡಹಳ್ಳಿ ಗೋಪಾಲ್, ಬನಕನಹಳ್ಳಿ ನಟರಾಜ್, ದಯಾನಂದ, ವೆಂಕಟಪತಿ, ರವೀಂದ್ರ, ನಾರಾಯಣಮ್ಮ, ಸುರೇಶ್ಗೌಡ, ಛತ್ರಕೋಡಿಹಳ್ಳಿ ರಾಮಕೃಷ್ಣೇಗೌಡ, ರವೀಂದ್ರ ಕುಮಾರ್, ಗೋಪಾಲಕೃಷ್ಣ, ಗೋಪಾಲ್, ಪಿಲ್ಲರ್ ಮಂಜು, ಆಟೋ ಮಣಿ, ರಾಜೇಶ್, ಅರಹಳ್ಳಿ ಅಶ್ವತ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement