ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ತಟಸ್ಥರಾಗಿದ್ದ ಹಲವರು ಮತ್ತೆ ಕಾಂಗ್ರೆಸ್ ಸೇರ್ಪಡೆ

Rashmi Kasaragodu
Updated On : 6 Apr 2014, 1:44 am

ಮಳವಳ್ಳಿ: ಪಕ್ಷದ ಕುರಿತು ಮುನಿಸಿಕೊಂಡು ತಟಸ್ಥರಾಗಿದ್ದ ಕಾಂಗ್ರೆಸ್ ಮುಖಂಡರು ಶನಿವಾರ ಮತ್ತೆ ಹೊಸದಾಗಿ ಪಕ್ಷ ಸೇರ್ಪಡೆಗೊಂಡರು.
ತಳಗವಾದಿ ಗ್ರಾಮದ ತಾಲೂಕು ಸೊಸೈಟಿಯ ಮಾಜಿ ನಿರ್ದೇಶಕ ಕಾಳಪ್ಪ, ಹನುಮಂತು, ಸೋಮೇಗೌಡ, ಚಂದ್ರು, ಸಿದ್ದರಾಜು, ಮಂಚೇಗೌಡ ಕಾಂಗ್ರೆಸ್ ಸೇರ್ಪಡೆಗೊಂಡವರಲ್ಲಿ ಪ್ರಮುಖರಾಗಿದ್ದು, ಇವರ ಜೊತೆ ಇನ್ನು ಹಲವರು ಶಾಸಕ ಪಿ.ಎಂ ನರೇಂದ್ರಸ್ವಾಮಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಶಾಸಕ ನರೇಂದ್ರಸ್ವಾಮಿ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ಸಾಧನೆ ಮೆಚ್ಚಿ ಹಾಗೂ ಕ್ಷೇತ್ರದ ಅಭಿವೃದ್ಧಿಬಗ್ಗೆ ಅಭಿಮಾನದಿಂದ ಕಾಂಗ್ರೆಸ್ ಸೇರ್ಪಡೆಗೊಂಡಿದ್ದು ಇವರ ಆಗಮನದಿಂದ ತಳಗವಾದಿ ಭಾಗದಲ್ಲಿ ಕಾಂಗ್ರೆಸ್ ಬಲ ಹೆಚ್ಚಾಗಿದೆ ಎಂದರು. ಜಿಪಂ ಮಾಜಿ ಸದಸ್ಯ ಚೌಡಯ್ಯ, ತಮ್ಮಣ್ಣ, ತಾಪಂ ಮಾಜಿ ಅಧ್ಯಕ್ಷ ಪ್ರಕಾಶ್, ಕಾಂಗ್ರೆಸ್ ನಗರ ಅಧ್ಯಕ್ಷ ದೇವರಾಜು, ಗ್ರಾಮಾಂತರ ಅಧ್ಯಕ್ಷ ಪುಟ್ಟರಾಮು ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement