ಬಾಬು ಆದರ್ಶಗಳು ಈಗ ಅಗತ್ಯ: ಹನುಮಂತರೆಡ್ಡಿ
ಚಿಂತಾಮಣಿ: ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ ಆದರ್ಶ, ತತ್ವ ಸಿದ್ಧಾಂತಗಳು ಇಂದಿನ ಜನರಿಗೆ ಮಾರ್ಗದರ್ಶಕವಾಗಲಿವೆ ಎಂದು ತಾಲೂಕು ದಂಡಾಧಿಕಾರಿ ಜಿ.ವಿ.ಹನುಮಂತರೆಡ್ಡಿ ಹೇಳಿದರು.
ತಾಲೂಕಿನ ಊಲವಾಡಿ ಗ್ರಾಮದ ಸಮುದಾಯ ಭವನದಲ್ಲಿ ಮಾದಿಗ ದಂಡೋರ ಸಂಘಟನೆಯು ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನರಾಮ್ ಅವರ 107ನೇ ಜನ್ಮದಿನಾಚರಣೆ ಅಂಗವಾಗಿ ಬಾಬು ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಮಾತನಾಡಿದರು. ಜಗಜೀವನರಾಮ್ ಅವರು ದಲಿತರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಮಹಾನ್ ವ್ಯಕ್ತಿ ಎಂದು ಹೇಳಿದರು.
ನಂತರ ಮಾದಿಗ ದಂಡೋರ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ವಿ.ರಾಮಪ್ಪ ಮಕ್ಕಳಿಗೆ ಸಿಹಿಯನ್ನು ಹಂಚಿದರು.