ಸಿಎಂ ವಜಾಕ್ಕೆ ರೈತ ಸಂಘ ಆಗ್ರಹ
ಬಂಗಾರಪೇಟೆ: ರೈತರ ಬಗ್ಗೆ ಕೀಳರಿಮೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೂಡಲೇ ವಜಾಗೊಳಿಸಬೇಕೆಂದು ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಅಧ್ಯಕ್ಷ ರಾಮೇಗೌಡ, ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ರೈತರ ಮದ್ಯ ಸೇವಿಸಿದ್ದ ಮತ್ತು ಆತನ ಸಾವಿಗೂ ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಇದುರ ರೈತರ ಸಮುದಾಯಕ್ಕೆ ದೊಡ್ಡ ಅವಮಾನ ಎಂದು ಹೇಳಿದರು. ಸಿದ್ದರಾಮಯ್ಯ ಅವರ ಈ ಹೇಳಿಕೆಯನ್ನು ಗಮನಿಸಿದರೆ ಅವರಿಗೆ ಮಾನಸಿಕ ಸ್ಥಿಮಿತ ಇಲ್ಲದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಹಾಗಾಗಿ ಕೂಡಲೇ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.