ಮುನಿಯಪ್ಪರ ಸೋಲಿಸಲು ಜೆಡಿಎಸ್ ವ್ಯರ್ಥ ಪ್ರಯತ್ನ
ಕೋಲಾರ: ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪರನ್ನು ಸೋಲಿಸಲು ಮಾಜಿ ಸಚಿವ ಕೆ. ಶ್ರೀನಿವಾಸಗೌಡ ಮತ್ತು ಜೆಡಿಎಸ್ನವರು ವ್ಯರ್ಥ ಪ್ರಯತ್ನ ನಡೆಸುತ್ತಿದ್ದು ಆತುರದ ಪ್ರಯತ್ನ ಫಲಿಸದು ಎಂದು ಶಾಸಕ ಕೆ.ಆರ್. ರಮೇಶ್ ಕುಮಾರ್ ತಿಳಿಸಿದರು. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಮುದುವಾಡಿ ಗ್ರಾಮದಲ್ಲಿ ಕಾಂಗ್ರೆಸ್ ಪರ ಮತಯಾಚಿಸಿ ಮಾತನಾಡಿದರು.