ಸ್ವೀಪ್: ಕಾರ್ಮಿಕರಿಗೆ ಮತದಾನ ಜಾಗೃತಿ
ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಕ್ರಮ
ಕೋಲಾರ: ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಸಾವಿರಾರು ಕಾರ್ಮಿಕರಿಗೆ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಮೂಡಿಸಲಾಯಿತು.
ಜಿಲ್ಲಾಡಳಿತ ಮತ್ತು ಜಿಪಂ ಸ್ವೀಪ್ ಸಮಿತಿ ಸೂಚನೆಯಂತೆ ನಡೆದ ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶದ ಹೋಂಡಾ, ಸ್ಕ್ಯಾನಿಯಾ, ಎಎಸ್‌ಕೆ ಸೇರಿದಂತೆ ಹಲವಾರು ಕಂಪನಿಗಳ ಕಾರ್ಮಿಕರು ಈ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮತದಾನನ ಪ್ರತಿಜ್ಞೆ ಸ್ವೀಕರಿಸಿದರು. ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ವಿ.ಟಿ. ವೆಂಕಟೇಶ್, 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳಬೇಕು, ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಇದು ಅತ್ಯಗತ್ಯ ಎಂದು ತಿಳಿಸಿದರು. ಕಾರ್ಮಿಕರಿಗೆ ಮತದಾನದಲ್ಲಿ ಪಾಲ್ಗೊಳ್ಳಲು ಉದ್ಯಮಪತಿಗಳು ಕಾನೂನಿನಡಿ ಅವಕಾಶ ಕಲ್ಪಿಸಬೇಕು, ಇದನ್ನು ಮೀರಿದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಅವಕಾಶಗಳಿವೆ ಎಂದು ತಿಳಿಸಿದರು. ಕಾರ್ಮಿಕ ಅಧಿಕಾರಿ ರಾಜಗೋಪಾಲ್, ಕಾರ್ಮಿಕ ಹಕ್ಕುಗಳ ರಕ್ಷಣೆಗಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರಮುಖ ಕರ್ತವ್ಯವಾಗಿದ್ದು ಪ್ರತಿಯೊಬ್ಬರೂ ಪಾಲಿಸಿ ಎಂದು ಕರೆ ನೀಡಿದರು. ಜಿಲ್ಲಾ ನೌಕರರ ಸಂಘದ ಗೌರವಾಧ್ಯಕ್ಷ ರವಿಚಂದ ಮಾತನಾಡಿದರು. ಕೈಗಾರಿಕಾ ಇಲಾಖೆ ಡಿಡಿ ಶ್ರೀನಿವಾಸರೆಡ್ಡಿ, ರಫಿಕ್ ಅಹಮದ್, ಪರಿಸರ ಇಲಾಖೆಯ ಸೋಮಶೇಖರ್ ಇದ್ದರು