11ಕ್ಕೆ ಬೃಹತ್ ರೋಡ್ ಶೋ: ಸುಧಾಕರ್
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿ ಪರವಾಗಿ ನಗರದಲ್ಲಿ ಏ.11ರಂದು ಮಧ್ಯಾಹ್ನ 2 ಗಂಟೆಗೆ ಬೃಹತ್ ರೋಡ್ ಶೋ ಪ್ರಚಾರ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಕೆ.ಸುಧಾಕರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ವೀರಪ್ಪ ಮೊಯ್ಲಿ ಗೆಲುವಿಗಾಗಿ ಈಗಾಗಲೇ ಕ್ಷೇತ್ರದಲ್ಲಿ ಎರಡನೇ ಸುತ್ತಿನ ಪ್ರಚಾರ ನಡೆದಿದೆ. ಮೊದಲಿಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 85 ಕಿ.ಮೀ ಪಾದಯಾತ್ರೆ ನಡೆಸಿದ್ದು, ಇದೀಗ ನಗರ ವಾರ್ಡ್ ವಾರು ಮತ್ತು ಗ್ರಾಮ ಗ್ರಾಮಗಳಿಗೆ ಹೋಗಿ ಕಾಂಗ್ರೆಸ್ಸ್ರ್ಕಾರದ ಸಾಧನೆಗಳನ್ನು ತಿಳಿಸಲಾಗುತ್ತಿದೆ' ಎಂದರು.
ಏ.11ರಂದು ನಗರದಲ್ಲಿ ಮಧ್ಯಾಹ್ನ 2 ಗಂಟೆಗೆ ಬೃಹತ್ ರೋಡ್ ಶೋ ಪ್ರಮುಖ ರಸ್ತೆಗಳಲ್ಲಿ ನಡೆಯಲಿದೆ. ರ್ಯಾಲಿಯಲ್ಲಿ ಚಿರಂಜೀವಿ ಸೇರಿದಂತೆ ಪ್ರಮುಖ ಅನೇಕ ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. ನಂತರ ಸಂಜೆ 6 ಗಂಟೆಗೆ ಪಂಜಿನ ಮೆರವಣಿಗೆಯನ್ನು ಸಹ ಕೈಗೊಳ್ಳಲಾಗುತ್ತದೆ ಎಂದರು.
ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಸೋಲುತ್ತಾರೆ ಎಂಬ ಸಮೀಕ್ಷಾ ವರದಿಗಳು ಶುದ್ಧ ಸುಳ್ಳು. ಕ್ಷೇತ್ರ ಕಾಂಗ್ರೆಸ್ನ ಭದ್ರಕೋಟೆ. ಅಲ್ಲದೇ ಇಲ್ಲಿನ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿಗೆ ಕಾಂಗ್ರೆಸ್ನ ಶಾಸಕರೇ ಇದ್ದಾರೆ. ಅವರೆಲ್ಲರೂ ಕಾರ್ಯಕರ್ತರೊಂದಿಗೆ ಮೊಯ್ಲಿ ಅವರನ್ನು ಗೆಲ್ಲಿಸಲು ಶ್ರಮಿಸುತ್ತಿದ್ದಾರೆ. 1 ಲಕ್ಷ ಮತಗಳ ಅಂತರದಲ್ಲಿ ಮೊಯ್ಲಿ ಗೆಲುವನ್ನು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಕೆ.ವಿ. ನವೀನ್ ಕಿರಣ್, ಮಹಮದ್ ರಫಿಕ್, ಕೃಷ್ಣಮೂರ್ತಿ, ಆರ್.ಎಚ್. ನಾರಾಯಣಸ್ವಾಮಿ, ಶ್ರೀನಿವಾಸ್, ಮಹಮದ್ ಇಕ್ಬಾಲ್, ಆವಲಪ್ಪ ಮುಂತಾದವರು ಉಪಸ್ಥಿತರಿದ್ದರು.