ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ಮೋಹ ಬಿಟ್ಟು ನಿಷ್ಪಕ್ಷ ತೀರ್ಪು ನೀಡಿ'

Mainashree
Updated On : 8 Apr 2014, 12:47 pm

ಶಿಡ್ಲಘಟ್ಟ: ನ್ಯಾಯಾಧೀಶರ ಸ್ಥಾನದಲ್ಲಿ ಕೂತ ಮೇಲೆ ಜಾತಿ, ಧರ್ಮ, ವರ್ಗದ ಮೇಲಿನ ವ್ಯಾಮೋಹ, ಬಂಧು ಬಳಗವೆಂಬ ಮಮಕಾರವನ್ನು ಮೊದಲು ದೂರ ಮಾಡಿಕೊಳ್ಳಬೇಕು. ಇಲ್ಲವಾದರೆ ನಿಷ್ಪಕ್ಷಪಾತವಾಗಿ ನ್ಯಾಯ ತೀರ್ಮಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು ಸಿವಿಲ್ ಪ್ರಧಾನ ನ್ಯಾಯಾಧೀಶ ಎಸ್.ಮಹೇಶ್ ಅಭಿಪ್ರಾಯಪಟ್ಟರು.
ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾಗಿ ಆಯ್ಕೆಯಾದ ರಮೇಶ್ ಬಾಬು ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಈ ಸ್ಥಾನದಲ್ಲಿ ಕೂತ ಮೇಲೆ ಮಾಡುವ ಸಣ್ಣ ತಪ್ಪಿಗೂ ದೊಡ್ಡ ಪ್ರಮಾದವನ್ನೇ ಎದುರಿಸಬೇಕಾಗುತ್ತದೆ ಎಂದರು.
ಈ ದೇಶದ ಜೆಎಂಎಫ್ಸಿಯಿಂದ ಸುಪ್ರೀಂ ಕೋರ್ಟ್ವರೆಗೂ ವಾದ ಮಂಡಿಸುವ ವಕೀಲರು ಬೇರೆ ಬೇರೆಯಾಗಿರಬಹದು. ಆದರೆ ಇಡೀ ದೇಶದ ಎಲ್ಲರಿಗೂ ಕಾನೂನು ಇರೋದು ಒಂದೆ. ಅದನ್ನು ಮನದಲ್ಲಿ ಇಟ್ಟುಕೊಂಡು ಕಾರ್ಯ ನಿರ್ವಹಿಸಬೇಕು ಎಂದರು.
ನ್ಯಾಯಾಧೀಶರಾದ ವಿಜಯ ದೇವರಾಜ್ ಅರಸ್ ಮಾತನಾಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿ.ಎನ್.ರಮೇಶ್ಬಾಬು, ನ್ಯಾಯಾಧೀಶನಾಗಿ ಆಯ್ಕೆಯಾದ ಕೀರ್ತನೆ ನನ್ನೊಬ್ಬನಿಗೆ ಸಲ್ಲುವುದಿಲ್ಲ. ಅದು ನಮ್ಮ ಹೆತ್ತವರು, ನನ್ನ ಸಹಪಾಠಿಗಳು, ಹಿರಿಯ ವಕೀಲರು ಹಾಗೂ ಸ್ಥಳೀಯ ನ್ಯಾಯಾಲಯದ ನ್ಯಾಯಾಧೀಶರು, ಸಿಬ್ಬಂದಿ ಸೇರಿದಂತೆ ನನಗೆ ಸಹಕರಿಸಿದ ಎಲ್ಲರಿಗೂ ಸಲ್ಲುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement