ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಇಂದು ಕೋಲಾರದಲ್ಲಿ ಸೋನಿಯಾ ಪ್ರಚಾರ

Mainashree
Updated On : 9 Apr 2014, 10:50 am

ಕನ್ನಡಪ್ರಭ ವಾರ್ತೆ, ಕೋಲಾರ, ಏ.8
ಪ್ರಚಾರಕ್ಕಾಗಿ ಬುಧವಾರ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಕೋಲಾರ ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಅದ್ಧೂರಿ ಸ್ವಾಗತಕ್ಕೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಖಾದರ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಕೋಲಾರ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 1 ಲಕ್ಷ ಕಾರ್ಯಕರ್ತರನ್ನು ಸಭೆಗೆ ಸೇರಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಸೋನಿಯಾ ಸಭೆಯಲ್ಲಿ ತಮ್ಮ ಬೆಂಬಲಿಗರ ಶಕ್ತಿ ಪ್ರದರ್ಶನಕ್ಕೆ ಶಾಸಕ ವರ್ತೂರ್ ಪ್ರಕಾಶ್ ಸಿದ್ಧತೆ ನಡೆಸಿದ್ದಾರೆ. ಹೀಗಿದ್ದಾಗ್ಯೂ ಬುಧವಾರ ವರ್ತೂರ್ ಪ್ರಕಾಶ್ ಕಾಂಗ್ರೆಸ್ ಸೇರುವುದ ಇನ್ನೂ ನಿಶ್ಚಯವಾಗಿಲ್ಲ! ವರ್ತೂರ್ ಸೇರ್ಪಡೆಗೆ ಕೆಲವು ಮುಖಂಡರು ವಿರೋಧ ವ್ಯಕ್ತಪಡಿಸಿದ್ದು ಇದಕ್ಕೆ ಕಾರಣ. ಈ ಹಿನ್ನೆಲೆಯಲ್ಲಿ ಮುನಿಯಪ್ಪ ಅವರು ವರ್ತೂರ್‌ಗೆ ಕರೆ ಮಾಡಿ, ಸ್ವಲ್ಪ ತಾಳ್ಮೆಯಿಂದಿರುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಜೀರ್ ಪ್ರಚಾರ?: ಮಂಗಳವಾರ ಹಾಸನಕ್ಕೆ ತೆರಳಿ ಕಾಂಗ್ರೆಸ್ ಪರವಾಗಿ ಪ್ರಚಾರ ಕೈಗೊಂಡಿರುವ ನಜೀರ್ ಅಹ್ಮದ್ ಅವರು, ಬುಧವಾರ ಸೋನಿಯಾ ಗಾಂಧಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗುರುವಾರದಿಂದ ಕೋಲಾರ ಕ್ಷೇತ್ರದಲ್ಲಿ ಮುನಿಯಪ್ಪ ಪರವಾಗಿ ಪ್ರಚಾರ ಮಾಡಲಿದ್ದಾರೆ ಎಂದು ಗೊತ್ತಾಗಿದೆ. ಸೋನಿಯಾ ಗಾಂಧಿ ಆಗಮನದ ಹಿನ್ನಲೆಯಲ್ಲಿ ಕೋಲಾರದಲ್ಲಿ ಪೊಲೀಸ್ ಸರ್ಪಗಾವಲು ಹೆಚ್ಚಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement