ಜೆಡಿಎಸ್ನಿಂದ ಅಲ್ಪಸಂಖ್ಯಾತರಿಗೆ ಲಾಭವಿಲ್ಲ
ಕೋಲಾರ: ಅಲ್ಪಸಂಖ್ಯಾತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಜೆಡಿಎಸ್ ಮುಖಂಡರು, ಕಾಂಗ್ರೆಸ್ ಸೋಲಿಸಲು ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಆರೋಪಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್ನಿಂದ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯಲ್ಲೂ ಉಪಯೋಗವಿಲ್ಲ. ರಾಜ್ಯದಲ್ಲಿ ಗೆಲ್ಲಲು ಅವಕಾಶವಿರುವೆಡೆ ಎಲ್ಲಿಯೂ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿಲ್ಲ. ಗೆಲ್ಲಲು ಸಾಧ್ಯವಿರುವೆಡೆ ತಮ್ಮ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಿದೆ ಎಂದು ದೂರಿದರು. 125 ಕೋಟಿ ಜನಸಂಖ್ಯೆ ಇರುವ ಭಾರತವನ್ನು ಒಬ್ಬ ವ್ಯಕ್ತಿಯಿಂದ ಮುನ್ನಡೆಸುವ ದುಸ್ಸಾಹಸಕ್ಕೆ ಬಿಜೆಪಿ ಕೈಹಾಕಿದೆ. ಮೋದಿಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿರುವು ಮೂರ್ಖತನ ಎಂದು ಕಿಡಿಕಾರಿದರು.
ಕಾಂಗ್ರೆಸ್ನಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ ಎಂಬ ಜಾಫರ್ ಷರೀಫ್ ಅವರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಲ್ಪಸಂಖ್ಯಾತರಿಗೆ ಯಾವುದೇ ಅನ್ಯಾಯವಾಗಿಲ್ಲ ಎಂದರು.