ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮನೆಗಳಿಗೆ ಡಿಸಿ ತಂಡ

Srinivasa Murthy VN
Updated On : 10 Apr 2014, 2:03 am

ಕೋಲಾರ: ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ ಮತದಾರಲ್ಲಿ ಅರಿವು ಮೂಡಿಸಲು ಏ.10ರಂದು ಕೋಲಾರ ನಗರದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಾರಥ್ಯದಲ್ಲಿ ಮನೆ-ಮನೆ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕೋಲಾರ ನಗರ ಪ್ರದೇಶಗಳಲ್ಲಿರುವ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿಲಿದ್ದಾರೆ. ಉಪನ್ಯಾಸಕರ ಪೈಕಿ ಒಬ್ಬರನ್ನು ನೋಡಲ್ ಅಧಿಕಾರಿಯನ್ನಾಗಿಸಿ ವಿದ್ಯಾರ್ಥಿಗಳೊಂದಿಗೆ ಕೋಲಾರ ಸರ್ವಜ್ಞ ಪಾರ್ಕ್‌ನಲ್ಲಿ ವಿದ್ಯಾರ್ಥಿಗಳ ಸೇರಿಸಲು ಸೂಚಿಸಲಾಗಿದೆ.

ಚುನಾವಣೆ: ಬಸ್ ವ್ಯವಸ್ಥೆ
ಕೋಲಾರ: ಸಂಸತ್ ಚುನಾವಣೆಗಾಗಿ ಮತದಾರರನ್ನು ಪರಿಣಾಮಕಾರಿಯಾಗಿ ಭಾಗಿತ್ವಗೊಳಿಸಲು ಬಸ್ ವ್ಯವಸ್ಥೆ ಕಲ್ಪಿಸಲು ಜಿಲ್ಲಾ ಚುನಾವಣಾಧಿಕಾರಿಗಳು ರಸ್ತೆ ಸಾರಿಗೆ ಸಂಸ್ಥೆಗೆ ಸೂಚಿಸಿದ್ದಾರೆ. ಹಿಂದುಳಿದ ಜನ ಸಮೂಹದಲ್ಲಿ ಮತಚಲಾಯಿಸುವ ಅರಿವನ್ನು ಉಂಟು ಮಾಡಲು ಅಂಗವಿಕಲರಿಗೆ, ವಯೋವೃದ್ಧರಿಗೆ, ಅಸ್ವಸ್ಥರಿಗೆ ನೆರವಾಗಲು ಏ.17ರಂದು ಬೆಳಿಗ್ಗೆ 6.30ಕ್ಕೆ ಸರ್ಕಾರಿ ಬಸ್ ಸೌಲಭ್ಯಗಳನ್ನು ಏರ್ಪಡಿಸಲಾಗಿದೆ. ಮತದಾರರು ಜಿಲ್ಲಾಡಳಿತ ವತಿಯಿಂದ ವ್ಯವಸ್ಥಿತಗೊಳಿಸಿರುವ ಸರ್ಕಾರಿ ಬಸ್‌ಗಳಲ್ಲಿ ಮತಗಟ್ಟೆಗಳಿಗೆ ತೆರಳಲು ನಿಗಧಿಪಡಿಸಿರುವ ಅತ್ಯಲ್ಪ ದರ 1 ರು. ಪಾವತಿಸಿ ಸುಲಭವಾಗಿ ಪ್ರಯಾಣಿಸಿ ಮತಚಲಾಯಿಸಿದ ಬಳಿಕ ಪುನಃ ಅಷ್ಟೇ ಶುಲ್ಕ ಪಾವತಿಸಿ ತಮ್ಮ ಗ್ರಾಮಕ್ಕೆ ಪ್ರಯಾಣ ಬೆಳೆಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೆಡಿಎಸ್‌ಗೆ ರಾಜಿನಾಮೆ
ಕೋಲಾರ: ಜಾತ್ಯತೀತ ಜನತಾದಳದ ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಕ್ಯಾಲನೂರಿನ ಕೆ.ವಿ.ರಾಮಪ್ಪ ಮತ್ತು ಪಕ್ಷದ ವೇಮಗಲ್ ಹೋಬಳಿ ಅಧ್ಯಕ್ಷ ಚಂಜಿಮಲೆ ರಮೇಶ್ ತಮ್ಮ ಸ್ಥಾನಗಳಿಗೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಈ ಸಂಬಂಧ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಕೆ.ವಿ.ರಾಮಪ್ಪ ಪಕ್ಷದ ರಾಜ್ಯಾಧ್ಯಕ್ಷರಿಗೆ ಮತ್ತು ವೇಮಗಲ್ ಹೋಬಳಿ ಅಧ್ಯಕ್ಷ ಚೆಂಜಿಮಲೆ ರಮೇಶ್ ಜಿಲ್ಲಾಧ್ಯಕ್ಷರಿಗೆ ರಾಜಿನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ರಾಹುಲ್ ಪ್ರಚಾರಕ್ಕೆ ಆಗ್ರಹ
ಕೆಜಿಎಫ್: ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ ಸಭೆಯನ್ನು ಏರ್ಪಡಿಸಬೇಕು ಎಂದು ಎಐಸಿಸಿ ಸದಸ್ಯ ಎನ್. ಶ್ರೀನಿವಾಸ್ ಅವರು ಸೋನಿಯಾ ಗಾಂಧಿಗೆ ಮನವಿ ಮಾಡಿಕೊಂಡಿದ್ದಾರೆ. ಬುಧವಾರ ಕೋಲಾರಕ್ಕೆ ಆಗಮಿಸಿದ್ದ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಶ್ರೀನಿವಾಸ್, ಕೋಲಾರ ಜಿಲ್ಲೆ ಸೇರಿದಂತೆ ಕೆಜಿಎಫ್ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಯೋಜನೆಗಳು ಜಾರಿಯಾಗಿವೆ. ಅಲ್ಲದೆ, ಕೆಜಿಎಫ್ ಚಿನ್ನದ ಗಣಿ ಪ್ರದೇಶಕ್ಕೆ ಈ ಹಿಂದೆ ದಿ.ಮಾಜಿ ಪ್ರಧಾನಿಗಳಾದ ಜವಾಹರ್ ಲಾಲ ನೆಹರು ಮತ್ತು ಇಂದಿರಾ ಗಾಂಧಿ ಭೇಟಿ ನೀಡಿದ್ದರು. ಹಾಗಾಗಿ, ಕೋಲಾರ ಅಭ್ಯರ್ಥಿ ಮುನಿಯಪ್ಪ ಪರವಾಗಿ ಪ್ರಚಾರ ಮಾಡಲು ರಾಹುಲ್ ಸಭೆ ಆಯೋಜಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement