ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಾಲ ಬಾಧೆ: ಕೋಲಾರದ ಮತ್ತೊಬ್ಬ ರೈತ ಆತ್ಮಹತ್ಯೆ

Srinivasa Murthy VN
Updated On : 10 Apr 2014, 12:52 pm

ಕೋಲಾರ: ಕಿತ್ತಂಡೂರು ಗ್ರಾಮದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮೊದಲೇ ಸಾಲದ ಭಾದೆ ತಾಳಲಾರದೇ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಜರುಗಿದೆ.
ಶ್ರೀನಿವಾಸ್ (45) ಮೃತಪಟ್ಟ ರೈತನಾಗಿದ್ದು, ಇವರಿಗೆ 6 ಎಕರೆ ಜಮೀನಿದ್ದು, 8 ಬೋರ್‌ವೆಲ್ ಕೊರೆಸಿದ್ದಾರೆ. ಈ ಪೈಕಿ ಎರಡರಲ್ಲಿ ಸ್ವಲ್ಪ ಪ್ರಮಾಣದಲ್ಲಿ ನೀರು ಬರುತ್ತಿದೆ. 6 ಎಕರೆ ಭೂಮಿಯಲ್ಲಿ ರೇಷ್ಮೆ, ಆಲೂಗಡ್ಡೆ ಬೆಳೆದಿದ್ದು, ಬೋರ್‌ವೆಲ್‌ಗಳಲ್ಲಿ ನೀರು ನಿಂತು ಹೋಗಿದ್ದರಿಂದ ಬೆಳೆಗಳು ನಾಶವಾಗಿದೆ. ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಕಾಮಧೇನುಹಳ್ಳಿ ಶಾಖೆಯಲ್ಲಿ ರು. 10 ಲಕ್ಷ ಮತ್ತು ಖಾಸಗಿ ವ್ಯಕ್ತಿಗಳಿಂದ ರು. 5 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ಬ್ಯಾಂಕಿನ ಸಿಬ್ಬಂದಿ ಕಳೆದ ಒಂದು ತಿಂಗಳಿನಿಂದ ಸಾಲ ಮರು ಪಾವತಿ ಮಾಡುವಂತೆ ಪೀಡಿಗಿಸುತ್ತಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತನ ಕುಟುಂಬದವರು ದೂರಿದ್ದಾರೆ.
ಕೆಪಿಆರ್‌ಎಸ್ ನಿಯೋಗ ಭೇಟಿ: ಕರ್ನಾಟಕ ಪ್ರಾಂತ ರೈತ ಸಂಘದ ನಿಯೋಗ ಯಡಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ರೈತ ಶ್ರೀನಿವಾಸ್ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತ ರೈತನ ಕುಟುಂಬದ ಸಾಲ ಮನ್ನಾ ಮಾಡಬೇಕು, ಪರಿಹಾರ ನೀಡಬೇಕು ಮತ್ತು ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದೆ. ನಿಯೋಗದಲ್ಲಿ ಜಿಲ್ಲಾ ಕಾರ್ಯದರ್ಶಿ ಟಿ.ಎಂ. ವೆಂಕಟೇಶ್, ತಾಲೂಕು ಅಧ್ಯಕ್ಷ ಕುರ್ಕಿ ದೇವರಾಜ್, ಎನ್.ಎನ್. ಶ್ರೀರಾಮ್, ಎಸ್. ರಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement