ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬಿಜೆಪಿ ದಲಿತ ವಿರೋಧಿಯಲ್ಲ

Srinivasa Murthy VN
Updated On : 11 Apr 2014, 1:13 am

ಚಿಕ್ಕಬಳ್ಳಾಪುರ: ಬಿಜೆಪಿ ಪಕ್ಷವನ್ನು ಕೋಮುವಾದಿ ಪಕ್ಷ, ದಲಿತ ಮತ್ತು ಮುಸ್ಲಿಂ ವಿರೋಧಿ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಎಸ್.ಸಿ. ಮೋರ್ಚಾದ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸ್ವಾತಂತ್ರ್ಯ ಬಂದ 60 ವರ್ಷಗಳಲ್ಲಿ ಯಾವುದೇ ಸರ್ಕಾರಗಳು ಮಾಡದಂತ ದಲಿತ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೆಬೇಕೆಂಬ ಪಣ ತೊಟ್ಟಿದ್ದೇವೆ. ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಿಂದ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡರನ್ನು ಗೆಲ್ಲಿಸಿದರೆ ಮೋದಿ ಪ್ರಧಾನಿಯಾಗಲು ಬಲ ಬರುತ್ತದೆ. ಕಳೆದ 60 ವರ್ಷಗಳಿಂದ ಭೋವಿ ಜನಾಂಗವನ್ನು ಯಾರು ಗುರ್ತಿಸಿರಲಿಲ್ಲ, ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಭೋವಿ ಜನಾಂಗದ ನಾಯಕ ಸಿದ್ದರಾಮೇಶ್ವರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವುದರ ಮುಖಾಂತರ ಜನಾಂಗವನ್ನು ಗುರ್ತಿಸಿದೆ. ಜನಾಂಗದ ಅಭಿವೃದ್ಧಿಗೆ ಸದಾನಂದ ಗೌಡರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತ್ಯೇಕ ನಿಗಮ ಮಂಡಳಿ ಮಾಡಲು ಎಲ್ಲಾ ಸಿದ್ಧತೆ ಕೈಗೊಂಡಿದ್ದರು. ನಂತರ ಬಂದ ಕಾಂಗ್ರೆಸ್ ಸರ್ಕಾರ ಅದನ್ನು ಮೂಲೆಗುಂಪು ಮಾಡಿತು ಎಂದು ಆರೋಪಿಸಿದರು.
ದಲಿತರ ಪರವಾಗಿ ಕಳೆದ 60 ವರ್ಷಗಳಿಂದ ನಾವಿದ್ದೇವೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪರಿಶಿಷ್ಟ ಜಾತಿ ವರ್ಗದವರ ಅಭಿವೃದ್ಧಿಗೆ 1,400 ಕೋಟಿ ಹಣ ಮಾತ್ರ ಮೀಸಲಿಟ್ಟಿದ್ದರು. ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರು 6,800 ಕೋಟಿ, ಸದಾನಂದ ಗೌಡ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರು 7,200 ಕೋಟಿ,  ಜಗದೀಶ್ ಶೆಟ್ಟರ್ ಅಧಿಯಲ್ಲಿ ರು 8,400 ಕೋಟಿ ವಾರ್ಷಿಕ ಅಯವ್ಯಯದಲ್ಲಿ ಮೀಸಲಿಟ್ಟಿದ್ದರು. ಆ ಹಣವನ್ನು ಸಂಪೂರ್ಣವಾಗಿ ದಲಿತರ ಅಭಿವೃದ್ಧಿಗೆ ವಿನಿಯೋಗಿಸಿದೆ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಭೋವಿ ಜನಾಂಗದವರು ಬಿಜೆಪಿ ಸರ್ಕಾರಕ್ಕೆ ಮತ ನೀಡುವ ಮೂಲಕ ನರೇಂದ್ರಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಬೇಕು ಎಂದರು.
ಭೋವಿ ಸಂಘದ ಜಿಲ್ಲಾಧ್ಯಕ್ಷ ಗವಿಗಾನಹಳ್ಳಿ ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ಜಯರಾಜು ಈ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಜನಾಂಗವನ್ನು ಗುರ್ತಿಸಿದೆ, ಆದ್ದರಿಂದ ಚುನಾವಣೆಯಲ್ಲಿ ಜನಾಂಗದವರು ಬಿಜೆಪಿ ಪಕ್ಷಕ್ಕೆ ಮತ ನೀಡಬೇಕು. ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಜನಾಂಗದ 5 ಮಂದಿ ಶಾಸಕರಿಗೆ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡಿತ್ತು. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜನಾಂಗದವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ ಈ ನಿಟ್ಟಿನಲ್ಲಿ ಜನಾಂಗದವರು ಬಿಜೆಪಿ ಪಕ್ಷಕ್ಕೆ ಮತ ನೀಡಬೇಕು ಎಂದು ಮನವಿ ಮಾಡಿದರು. ಯುವ ಮೋರ್ಚಾದ ರಾಜ್ಯ ಉಪಾಧ್ಯಕ್ಷ ತಮ್ಮೇಶ್‌ಗೌಡ, ನಾಯನಹಳ್ಳಿ ಶ್ರೀನಿವಾಸ್, ಎಸ್.ಎಂ. ಭಾಷಾ, ಶ್ರೀಕಾಂತ್ ಭಟ್, ಶಿವಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement