ಇಂದು ನರೇಂದ್ರ ಮೋದಿ ಸಮಾವೇಶ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಹೊರವಲಯದ ಕೊತ್ತನೂರು ಬಳಿ ಮಾ.13 ರಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡರ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ಈಗಾಗಲೇ ಸಕಲ ಸಿದ್ಧತೆ ಕೈಗೊಂಡಿದ್ದು ವಿಶಾಲ ವೇದಿಕೆ ಸಜ್ಜಾಗಿದೆ.
ಬೆಳಗ್ಗೆ 10.30 ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನರೇಂದ್ರ ಮೋದಿ ಹೆಲಿಕಾಪ್ಟರ್‌ನಲ್ಲಿ ಕೊತ್ತನೂರಿಗೆ ಆಗಮಿಸಲಿದ್ದಾರೆ. ಆ ನಂತರ ಸುಮಾರು ಒಂದು ಗಂಟೆ ಕಾಲ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ತೆಲುಗು ಚಿತ್ರನಟ ನಂದಮೂರಿ ಬಾಲಕೃಷ್ಣ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದಗೌಡ, ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ, ಮಾಜಿ ಸಚಿವ ಅಶೋಕ, ಶಾಸಕ ವಿಶ್ವನಾಥ್
ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಜಿಲ್ಲೆಯನ್ನು ಬಹುತೇಕ ಕಾಂಗ್ರೆಸ್ ಮತ್ತು ಜೆಡಿಎಸ್ ಹಿಡಿತದಲ್ಲಿಟ್ಟುಕೊಂಡಿದೆ. ಅದೇ ರೀತಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ. ಇಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೊಯ್ಲಿ ಹಾಗೂ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆಯಿಂದ ಕದನ ತೀವ್ರ ಕುತೂಹಲ ಮೂಡಿಸಿದ್ದು, ಇದರ ನಡುವೆ ಈ ಬಾರಿ ಮೋದಿ ಅಲೆಯಲ್ಲಿ ಬಿಜೆಪಿ ಕ್ಷೇತ್ರ ತನ್ನದಾಗಿಸಿಕೊಳ್ಳುವ ನಿಟ್ಟಿನಲ್ಲಿ ತೀವ್ರ ಕಸರತ್ತು ನಡೆಸುತ್ತಿದೆ.
ಮೋದಿ ಸಮಾವೇಶ ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಎಂ.ವೀರಪ್ಪಮೊಯ್ಲಿ ಚಲನಚಿತ್ರ ನಟರಾದ ಚಿರಂಜೀವಿ, ಐಂದ್ರಿತಾ ರೈ ಮತ್ತು ನೀತು ಸೇರಿದಂತೆ ಹಲವರನ್ನು, ಎಚ್.ಡಿ.ಕುಮಾರಸ್ವಾಮಿ ತಮ್ಮ ತಂದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್‌ಗೌಡ, ಆಮ್ ಆದ್ಮಿ ಪಾರ್ಟಿ ಆರಕೇಶ್ ಮಾಜಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್ ಮೂಲಕ ಪ್ರಚಾರ
ಮತಯಾಚನೆ ನಡೆದಿದೆ. ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿಯನ್ನು ಕರೆಸಿ ಕ್ಷೇತ್ರದಲ್ಲಿನ ಹೆಚ್ಚಿನ ಮತವನ್ನು ತಮ್ಮ ಬುಟ್ಟಿಗೆ ಹಾಕಿಕೊಳ್ಳಲು ತಂತ್ರ ರೂಪಿಸಿದೆ. ಮೋದಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಾರೀ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಗೌರಿಬಿದನೂರು: ಬಿಜೆಪಿ ಪರ ಪ್ರಚಾರ
ಗೌರಿಬಿದನೂರು: ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಮತ್ತು ಬಯಲುಸೀಮೆ ಪ್ರದೇಶಗಳಿಗೆ ನೀರಾವರಿ ಯೋಜನೆ ಜಾರಿಯಾಗಿ ಜಿಲ್ಲೆ ಸಮೃದ್ಧಿಯಾಗಲು ಈ ಬಾರಿ ಬಿಜೆಪಿ ಬೆಂಬಲಿಸಬೇಕಿದೆ ಎಂದು ಬಿಜೆಪಿ ಮುಖಂಡ ಶಶಿಧರ್ ಅಭಿಪ್ರಾಯಪಟ್ಟರು.
ಹೋಬಳಿಯ ಗೌಡಗೆರೆ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕಹನುಮೇಗೌಡ ಮಾತನಾಡಿದರು.
ಬಿಜೆಪಿ ಮುಖಂಡರಾದ ಜಿ.ಎಂ.ಗಂಗಾಧರಪ್ಪ, ಕೆ.ಎಂ.ರಮೇಶ್, ರುದ್ರೇಶ್, ಬಾಬು, ನಾರಾಯಣಸ್ವಾಮಿ, ಶಿವಕುಮಾರ್, ರಾಘವೇಂದ್ರಪ್ಪ, ಲಕ್ಷ್ಮೀಪತಿ ಮತ್ತಿತರರು ಉಪಸ್ಥಿತರಿದ್ದರು.