ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪಕ್ಷದ್ರೋಹ ಮಾಡಿಲ್ಲವೆಂದು ಹಾಲಿನ ಮೇಲೆ ಪ್ರಮಾಣ

Srinivasa Murthy VN
Updated On : 14 Apr 2014, 1:22 am

ಶಿಡ್ಲಘಟ್ಟ: ಅನ್ಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಬಗ್ಗೆ ಸಾಬೀತಾದರೆ ರಾಜಕೀಯವಾಗಿ ನಿವೃತ್ತಿಯಾಗುವುದಾಗಿ ಜೆಡಿಎಸ್ ಮುಖಂಡ ಮೇಲೂರು ಬಿ.ಎನ್. ರವಿಕುಮಾರ್ ಹಾಲಿನ ಮೇಲೆ ಪ್ರಮಾಣ ಮಾಡಿದರು.
ತಾಲೂಕಿನ ಜಂಗಮಕೋಟೆಯಲ್ಲಿ ಏರ್ಪಡಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್. ಮುನಿಯಪ್ಪ ಪರ ಕೆಲಸ ಮಾಡಲಿದ್ದು, ಕಾಂಗ್ರೆಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಅವರು ಗ್ಲಾಸಿನಲ್ಲಿ ಹಾಲನ್ನು ಹಿಡಿದು ಪ್ರಮಾಣ ಮಾಡುವ ಮೂಲಕ ಯಾವುದೇ ಪಕ್ಷದೊಂದಿಗೆ ರಾಜೀ ಮಾಡಿಕೊಂಡಿಲ್ಲ ಮನೆ ಮನೆಗೆ ತೆರಳಿ ಜೆಡಿಎಸ್ ಅಭ್ಯರ್ಥಿ ಪರ ಮತಯಾಚನೆ ಮಾಡಲು ಕೋರಿದರು.
ಶಾಸಕ ಎಂ. ರಾಜಣ್ಣ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ 16 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲವು ತಂದುಕೊಟ್ಟ ಕಾರ್ಯಕರ್ತರ ಭಾವನೆಗಳಿಗೆ ವಿರುದ್ಧವಾಗಿ ನಡೆದುಕೊಂಡಿಲ್ಲ ಜೆಡಿಎಸ್ ಅಭ್ಯರ್ಥಿ ಗೆಲವು ಸಾಧಿಸಿದರೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಯತ್ತ ಕೊಂಡೊಯ್ಯುವುದಾಗಿ ಭರವಸೆ ನೀಡಿದರು. ಮೇಲೂರು ಕೆ. ಮಂಜುನಾಥ್, ಆರ್.ಎ. ಉಮೇಶ್, ಬಂಕ್ ಮುನಿಯಪ್ಪ, ಪಿ.ವಿ. ನಾಗರಾಜ್, ನಜೀರ್‌ಅಹ್ಮದ್, ಶ್ರೀರಾಮರೆಡ್ಡಿ, ಮಳಮಾಚನಹಳ್ಳಿ ಬೈರೇಗೌಡ, ಅಪ್ಸರ್ ಪಾಷಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement