ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಯುಪಿಎ ಆಡಳಿತದಲ್ಲಿ ದೇಶದ ಭಾರಿ ಅಭಿವೃದ್ಧಿ

Srinivasa Murthy VN
Updated On : 16 Apr 2014, 1:59 am

ಕೆಜಿಎಫ್: ಯುಪಿಎ ತನ್ನ 10 ವರ್ಷದ ಆಡಳಿತದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅದೇ ರೀತಿ, ಕೋಲಾರ, ಕೆಜಿಎಫ್‌ಗಳಲ್ಲೂ ಅನೇಕ ಪ್ರಗತಿಯುತ ಕಾರ್ಯಕ್ರಮಗಳು ಜಾರಿಯಾಗಿವೆ ಎಂದು ರಾಜ್ಯ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಕಾರ್ತಿಕ್ ಹೇಳಿದರು.
ನಗರದಲ್ಲಿ ಮಂಗಳವಾರ ಚಿನ್ನದ ಗಣಿ ಪ್ರದೇಶ ಸೇರಿದಂತೆ ಕೋರಮಂಡಲ್, ಪಿಟ್ಟರ್ಸ್ ಬಡಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿಯಪ್ಪ ಪರ ಮನೆ ಮನೆಗೆ ತೆರಲಿ ಮತಯಾಚನೆ ನಡೆಸಿ ಮಾತನಾಡಿದ ಅವರು, ಇತಿಹಾಸ ಪ್ರಸಿದ್ಧ ಚಿನ್ನದ ಗಣಿಗಳ ಪುನಶ್ಚೇತನದಿಂದ ಕೋಲಾರ ಕ್ಷೇತ್ರದಲ್ಲಿ ಮುನಿಯಪ್ಪ ಅವರ ಜಯ ಖಚಿತ ಎಂದರು.

ಜೆಡಿಎಸ್ ಅಭ್ಯರ್ಥಿ ಕೇಶವ ಗೆಲವು ಖಚಿತ
ಬಂಗಾರಪೇಟೆ: ಈ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಕೇಶವ್ ಅವರು ಅತ್ಯಧಿಕ ಮತಗಳಿಂದ ಜಯ ಗಳಿಸುವುದು ಖಚಿತ ಎಂದು ಜೆಡಿಎಸ್ ಮುಖಂಡ ರಾಮಚಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಮಂಗಳವಾರ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡ ಬಳಿಕ ಮಾತನಾಡಿದ ಅವರು, 30ವರ್ಷಗಳಿಂದ ಜಿಲ್ಲೆಯಲ್ಲಿ ಜಿಡ್ಡುಗಟ್ಟಿದ ರಾಜಕೀಯ ವಾತಾವರಣ ನಿರ್ಮಾಣವಾಗಿದೆ ಎಂದರು. ಮತ್ತೊಂದೆಡೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸಹ ತಮ್ಮ ರಾಜಕೀಯ ಗುರುಗಳಾದ ಕಾಂಗ್ರೆಸ್ ಅಭ್ಯರ್ಥಿ ಮುನಿಯಪ್ಪ ಅವರ ಪರ ಕ್ಷೇತ್ರದಲ್ಲಿ ಮಂಗಳವಾರ ಪ್ರಚಾರ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement